ಕರ್ನಾಟಕ

karnataka

ETV Bharat / state

ಬಿಜೆಪಿ ನಾಯಕರಿಗೆ ಪಾಕಿಸ್ತಾನದ ವೈರಸ್ ಅಂಟಿಕೊಂಡಿದೆ: ಯು ಟಿ ಖಾದರ್ - ಮಾಜಿ ಸಚಿವ ಯು. ಟಿ. ಖಾದರ್ ಹೇಳಿಕೆ

ಬಿಜೆಪಿ ನಾಯಕರು ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುತ್ತಿದ್ದಾರೆ. ಇವರಿಗೆ ಪಾಕಿಸ್ತಾನದ ವೈರಸ್ ಬಂದಿದೆ. ಆ ವೈರಸ್ ಸರಿಯಾಗಬೇಕಾದರೆ ಅವರನ್ನು ಪಾಕಿಸ್ತಾನಕ್ಕೇ ಕಳುಹಿಸಬೇಕು ಎಂದು ಮಾಜಿ ಸಚಿವ ಯು. ಟಿ. ಖಾದರ್ ಕಿಡಿಕಾರಿದ್ದಾರೆ.

U.T. Khadhar
ಮಾಜಿ ಸಚಿವ ಯು. ಟಿ. ಖಾದರ್

By

Published : Feb 27, 2020, 5:34 PM IST

ಮಂಗಳೂರು: ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಡಿರುವ ಅವಮಾನ ಬಿಜೆಪಿಯ ರಹಸ್ಯ ಕಾರ್ಯಸೂಚಿಯ ಭಾಗವಾಗಿದೆ. ಬಿಜೆಪಿ ನಾಯಕರುಗಳಿಗೆ ಪಾಕಿಸ್ತಾನದ ವೈರಸ್ ಅಂಟಿಕೊಂಡಿದೆ ಎಂದು ಮಾಜಿ ಸಚಿವ ಯು. ಟಿ. ಖಾದರ್ ಟೀಕಿಸಿದ್ದಾರೆ.

ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದ ಮಾಜಿ ಸಚಿವ ಯು. ಟಿ. ಖಾದರ್
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲವು ತಿಂಗಳುಗಳಿಂದ ಬಿಜೆಪಿ ನಾಯಕರು ಸ್ವಾತಂತ್ರ್ಯ ಹೋರಾಟಗಾರರನ್ನು ಅಪಮಾನಿಸುತ್ತಿದ್ದಾರೆ. ಅವರಿಗೆ ಪಾಕಿಸ್ತಾನದ ವೈರಸ್ ಬಂದಿದೆ. ಆ ವೈರಸ್ ಸರಿಯಾಗಬೇಕಾದರೆ ಅವರನ್ನು ಪಾಕಿಸ್ತಾನಕ್ಕೇ ಕಳುಹಿಸಬೇಕು. ಯತ್ನಾಳ್ ಹೇಳಿಕೆ ಬಗ್ಗೆ ಬಿಜೆಪಿ ನಿಲುವೇನು ಎಂಬುದನ್ನು ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.
ದೆಹಲಿಯಲ್ಲಿ ಗಲಭೆ ನಿಯಂತ್ರಿಸಲು ಕೇಂದ್ರ ಸರ್ಕಾರ ಹಾಗೂ ದೆಹಲಿ ಸರ್ಕಾರ ಸಂಪೂರ್ಣ ವಿಫಲವಾಗಿವೆ. ಇದರ ಸಂಪೂರ್ಣ ಹೊಣೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಕೇಜ್ರಿವಾಲ್ ಹೊತ್ತುಕೊಳ್ಳಬೇಕು. ಅಮಿತ್ ಷಾ ಮತ್ತು ಕೇಜ್ರಿವಾಲ್ ರಾಜೀನಾಮೆ ನೀಡಬೇಕು ಎಂದು ಖಾದರ್​ ಒತ್ತಾಯಿಸಿದರು.

ದೆಹಲಿ ಘಟನೆಗೆ ಕಾಂಗ್ರೆಸ್ ಕಾರಣ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ನಗಬೇಕೋ, ಅಳಬೇಕೋ ಗೊತ್ತಿಲ್ಲ. ಅವರಿಗೆ ಬಿಜೆಪಿಯಲ್ಲಿ ಸ್ಥಾನವಿಲ್ಲ. ಅಲಂಕಾರಕ್ಕಾಗಿ ಕೂರಿಸಿದ್ದಾರೆ ಅಷ್ಟೇ. ದಕ್ಷಿಣ ಕನ್ನಡ ಜಿಲ್ಲೆಯಿಂದ ಹೋದ ನಾಯಕರು ಸ್ವಾಭಿಮಾನದಿಂದ ಇದ್ದರು. ಆದರೆ ನಳಿನ್ ಕುಮಾರ್​ಗೆ ಹೀಗೆ ಆದದ್ದು ನಮಗೆ ಬೇಸರ ತಂದಿದೆ. ಅವರು ಬಿಜೆಪಿಗೆ ದಕ್ಷಿಣ ಕನ್ನಡದ ಸ್ವಾಭಿಮಾನ ತೋರಿಸಬೇಕು ಎಂದರು.

ABOUT THE AUTHOR

...view details