ಮಂಗಳೂರು: ಕೋವಿಡ್-19 ನಿರ್ವಹಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಎನ್ಜಿಒಗಳನ್ನು ಬಳಸಿಕೊಳ್ಳುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಶಾಸಕ ಜೆ.ಆರ್.ಲೋಬೊ ಆರೋಪಿಸಿದ್ದಾರೆ.
ಕೊರೊನಾ ನಿರ್ವಹಣೆಯಲ್ಲಿ ಎನ್ಜಿಒಗಳಿಗೆ ಪ್ರಾಮುಖ್ಯತೆ ನೀಡಿಲ್ಲ: ಮಾಜಿ ಶಾಸಕ ಲೋಬೊ - ಮಾಜಿ ಶಾಸಕ ಜೆ. ಆರ್. ಲೋಬೋ ಆರೋಪ
ಎನ್ಜಿಒ ಸಂಸ್ಥೆಗಳು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ನಿಷ್ಠೆಯಿಂದ ಬಡ ಜನತೆಯ ಪರವಾಗಿ ಸೇವೆ ಸಲ್ಲಿಸುವ ಸಂಸ್ಥೆಗಳು. ಆದರೆ ಕೋವಿಡ್-19 ನಿರ್ವಹಣೆಯಲ್ಲಿ ಎನ್ಜಿಒಗಳಿಗೆ ಸರಿಯಾದ ಪ್ರಾಮುಖ್ಯತೆಯನ್ನು ದ.ಕ ಜಿಲ್ಲಾಡಳಿತ ನೀಡುವಲ್ಲಿ ವಿಫಲವಾಗಿದೆ ಎಂದು ಮಾಜಿ ಶಾಸಕ ಜೆ.ಆರ್.ಲೋಬೊ ಆರೋಪಿಸಿದರು.
ಮಾಜಿ ಶಾಸಕ ಜೆ. ಆರ್. ಲೋಬೋ
ಎನ್ ಜಿಒ ಸಂಸ್ಥೆಗಳು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ನಿಷ್ಠೆಯಿಂದ ಬಡ ಜನತೆಯ ಪರವಾಗಿ ಸೇವೆ ಸಲ್ಲಿಸುವ ಸಂಸ್ಥೆಗಳು. ಈ ಸಂದರ್ಭದಲ್ಲಿ ಅವರಿಗೆ ಅವಕಾಶ ನೀಡಿದ್ದಲ್ಲಿ ಅವರು ಜನರಿಗೆ ಕೇವಲ ಮಾಸ್ಕ್ ಮತ್ತು ಆಹಾರದ ಕಿಟ್ಗಳನ್ನು ನೀಡುವುದರ ಜೊತೆಗೆ ಕೊರೊನಾ ಸಂಕಷ್ಟಕ್ಕೊಳಗಾದ ಕುಟುಂಬಗಳಿಗೆ ಸಾಂತ್ವನ ಹಾಗೂ ಮಾಹಿತಿ ನೀಡುತ್ತಿದ್ದವು. ಇಂತಹ ಸಂದರ್ಭದಲ್ಲಿ ಸರ್ಕಾರ ಎನ್ಜಿಒಗಳನ್ನು ಬಳಸುವ ಅನೇಕ ನಿದರ್ಶನಗಳಿವೆ. ಆದರೆ ಇಂದು ಇಂತಹ ಸಂಸ್ಥೆಗಳನ್ನು ಸಂಪೂರ್ಣವಾಗಿ ಮೂಲೆಗುಂಪು ಮಾಡಲಾಗಿದೆ ಎಂದು ಅವರು ಆರೋಪಿಸಿದರು.