ಮಂಗಳೂರು: ಜಿಲ್ಲೆಯಲ್ಲಿ ಇಂದು ನಾಲ್ವರು ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 135ಕ್ಕೆ ಏರಿಕೆಯಾಗಿದೆ.
ಇಂದು ಸಾವನ್ನಪ್ಪಿದ ನಾಲ್ಕು ಮಂದಿಯ ಪೈಕಿ ಒಬ್ಬರು ಹಾಸನ, ಒಬ್ಬರು ಉತ್ತರಕನ್ನಡ ಜಿಲ್ಲೆಯವರಾಗಿದ್ದಾರೆ. ಇಬ್ಬರು ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರದ 84 ವರ್ಷದ ಗಂಡಸು, ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ 72 ವರ್ಷದ ಗಂಡಸು, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ 62 ವರ್ಷದ ಗಂಡಸು, 25 ವರ್ಷದ ಹೆಂಗಸು ಮೃತಪಟ್ಟವರಾಗಿದ್ದಾರೆ.