ಕರ್ನಾಟಕ

karnataka

ETV Bharat / state

ದ.ಕ ಜಿಲ್ಲೆಯಲ್ಲಿ ಇಂದು ನಾಲ್ವರಲ್ಲಿ ಕೊರೊನಾ ಸೋಂಕು ದೃಢ - Dakshina kannada district news

ಇಂದು ಜಿಲ್ಲೆಯಲ್ಲಿ ನಾಲ್ವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇಬ್ಬರು ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚಲಾಗುತ್ತಿದ್ದು, ಇವರೆಲ್ಲರನ್ನು ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Dakshina kannada district
ದ.ಕ.ಜಿಲ್ಲೆಯಲ್ಲಿ ಇಂದು ನಾಲ್ವರಲ್ಲಿ ಕೊರೊನಾ ಸೋಂಕು ದೃಢ

By

Published : Jun 1, 2020, 7:12 PM IST

ಮಂಗಳೂರು:ದ.ಕ ಜಿಲ್ಲೆಯಲ್ಲಿ ಇಂದು ನಾಲ್ವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 137ಕ್ಕೇರಿದೆ.

ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರಿಗೆ ಸೋಂಕು ದೃಢಪಟ್ಟಿದೆ. ಇದರಲ್ಲಿ 24 ವಯಸ್ಸಿನ ಮಹಿಳೆ ಹಾಗೂ 27 ವಯಸ್ಸಿನ ಪುರುಷನ ಸಂಪರ್ಕಿತರನ್ನು ಪತ್ತೆ ಹಚ್ಚಲಾಗುತ್ತಿದೆ. 45 ವಯಸ್ಸಿನ ಮಹಿಳೆಗೆ ಕೊರೊನಾ ಸೋಂಕಿತನ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗುಲಿದೆ. ಈ ಮಹಿಳೆಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ತಪಾಸಣೆ ನಡೆಸಿದಾಗ ಸೋಂಕು ಇರುವುದು ದೃಢಗೊಂಡಿದೆ. 50 ವರ್ಷದ ಪುರುಷ ಗುಜರಾತ್​ನಿಂದ ಬಂದು ಕ್ವಾರಂಟೈನ್​ನಲ್ಲಿದ್ದು, ಇದೀಗ ಅವರಲ್ಲಿ ಸೋಂಕು ಪತ್ತೆಯಾಗಿದೆ.

ಇವರೆಲ್ಲರನ್ನು ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮೂಲಕ ವೆನ್ಲಾಕ್ ಆಸ್ಪತ್ರೆಯಲ್ಲಿ 74 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ಸೋಂಕಿನಿಂದ ಏಳು ಮಂದಿ ಮೃತಪಟ್ಟಿದ್ದಾರೆ.

For All Latest Updates

ABOUT THE AUTHOR

...view details