ಕರ್ನಾಟಕ

karnataka

ETV Bharat / state

ಮಂಗಳೂರಿನ ಲಾಡ್ಜ್‌ನಲ್ಲಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ!

ಮಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

Four members of the same family  family committed suicide in Mangalore  Mangaluru crime news  ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ  ಮಂಗಳೂರಿನಲ್ಲಿ ಹೃದಯವಿದ್ರಾವಹ ಘಟನೆ  ಸಾಮೂಹಿಕ ಆತ್ಮಹತ್ಯೆಗೆ ನಿಖರ  ವ್ಯಕ್ತಿಯೊಬ್ಬ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಮಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

By

Published : Mar 31, 2023, 9:57 AM IST

Updated : Mar 31, 2023, 11:04 AM IST

ಮಂಗಳೂರು : ಮಂಗಳೂರು ನಗರದ ಕೆ.ಎಸ್.ರಾವ್ ರಸ್ತೆಯಲ್ಲಿರುವ ಲಾಡ್ಜ್​ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಮೈಸೂರು ಮೂಲದ ದೇವೇಂದ್ರ (48), ಪತ್ನಿ ನಿರ್ಮಲಾ ಹಾಗೂ 9 ವರ್ಷದ ಅವಳಿ ಮಕ್ಕಳಾದ ಚೈತನ್ಯ, ಚೈತ್ರಾ ಎಂದು ಗುರುತಿಸಲಾಗಿದೆ.

ಮೈಸೂರಿನ ವಿಜಯನಗರ ಮೂಲದ ದೇವೇಂದ್ರ ಅವರು ಪತ್ನಿ ಹಾಗೂ ಪುತ್ರಿಯರನ್ನು ಮೊದಲು ಹತ್ಯೆ ಮಾಡಿದ್ದಾರೆ. ಆ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ಮೃತದೇಹಗಳ ಬಳಿ ಡೆತ್ ನೋಟ್ ಪತ್ತೆಯಾಗಿದೆ. ಸಾಲ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬರೆದಿದ್ದಾರೆ. ನಾಲ್ವರಲ್ಲಿ ಓರ್ವ ವ್ಯಕ್ತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದರೆ, ಉಳಿದ ಮೂವರು ಮೃತದೇಹಗಳು ಮಲಗಿದ ಸ್ಥಿತಿಯಲ್ಲಿದ್ದವು.

ಮೂರು ದಿನಗಳಿಂದ ಲಾಡ್ಜ್​ನಲ್ಲಿ ವಾಸ್ತವ್ಯ ಹೂಡಿದ್ದರು. ಒಂದು ದಿನಕ್ಕೆ ಲಾಡ್ಜ್ ಬುಕ್ ಮಾಡಿದ್ದು ಆ ಬಳಿಕ ಎರಡು ದಿನಗಳಿಗೆ ವಿಸ್ತರಿಸಿದ್ದರು. ನಿನ್ನೆ ಸಂಜೆ ರೂಂ ಚೆಕ್ ಔಟ್ ಮಾಡಬೇಕಿತ್ತು. ಇಂದು ಬೆಳಗ್ಗೆ ಬಾಗಿಲು ತೆರೆಯದೇ ಇದ್ದಾಗ ಅನುಮಾನಗೊಂಡು ತಪಾಸಣೆ ಮಾಡಿದಾಗ ವಿಚಾರ ಬೆಳಕಿಗೆ ಬಂದಿದೆ. ಕೂಡಲೇ ಲಾಡ್ಜ್​ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಜೈನ್ ಮತ್ತು ಬಂದರು ಠಾಣಾ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಜೈನ್ ಮಾತನಾಡಿ, "ಮೈಸೂರಿನ ವಿಜಯ ನಗರ ಮೂಲದ ದೇವೇಂದ್ರ ಮತ್ತು ಅವರ ಕುಟುಂಬ ಈ ಲಾಡ್ಜ್‌ನಲ್ಲಿ ತಂಗಿದ್ದರು. ಒಂದು ದಿನಕ್ಕಾಗಿ ಬಾಡಿಗೆ ಪಡೆದು ಎರಡು ದಿನಗಳವರೆಗೆ ವಿಸ್ತರಿಸಿದ್ದರು. ದೇವೇಂದ್ರ ಅವರ ಕುಟುಂಬ ನಿನ್ನೆ ಸಂಜೆಯೇ ಚೆಕ್​ಔಟ್​ ಮಾಡಬೇಕಾಗಿತ್ತು. ಆದ್ರೆ ಸಂಜೆಯಿಂದ ಅವರು ಫೋನ್ ಕರೆ ಸ್ವೀಕರಿಸುತ್ತಿರಲಿಲ್ಲ ಎಂದು ತಿಳಿದುಬಂದಿದೆ. ಲಾಡ್ಜ್​ ಸಿಬ್ಬಂದಿ ಇಂದು ಬೆಳಗ್ಗೆ 8.30ರ ಸುಮಾರಿಗೆ ಕಿಟಕಿ ತೆಗೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಅವರು ಪೊಲೀಸ್​ ಠಾಣೆಗೆ ಸಂಪರ್ಕಿಸಿದ್ದರು. ಸುದ್ದಿ ತಿಳಿದು ನಮ್ಮ ಪೊಲೀಸ್​ ತಂಡ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ಕೈಗೊಂಡರು. ದೇವೇಂದ್ರ ಮತ್ತು ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಸಾವಿಗೀಡಾಗಿದ್ದಾರೆ. ಡೆತ್​ನೋಟ್ ಪತ್ತೆಯಾಗಿದ್ದು, ಅದರಲ್ಲಿ ಸಾಲದ ಸಮಸ್ಯೆಯನ್ನು ಪ್ರಸ್ತಾಪಿಸಿದ್ದಾರೆ" ಎಂದು ಹೇಳಿದರು.

ಬಂದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸಂಬಂಧಿಕರಿಗೆ ಮಾಹಿತಿ ರವಾನಿಸಲು ಕ್ರಮ ಕೈಗೊಂಡಿದ್ದಾರೆ. ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ:ಇಂದೋರ್ ದೇವಾಲಯದ ಮೆಟ್ಟಿಲುಬಾವಿ ಕುಸಿತ: ಮೃತರ ಸಂಖ್ಯೆ 35ಕ್ಕೆ ಏರಿಕೆ

Last Updated : Mar 31, 2023, 11:04 AM IST

ABOUT THE AUTHOR

...view details