ಕರ್ನಾಟಕ

karnataka

ETV Bharat / state

ಮಂಗಳೂರು: ನೆಟ್ಟಣದಲ್ಲಿ ಭೀಕರ ರಸ್ತೆ ಅಪಘಾತ, ನಾಲ್ವರು ಸಾವು - etv bharat kannada

ಎರಡು ಕಾರುಗಳ ನಡುವೆ ಮುಖಾಮುಖಿ ಅಪಘಾತ ಸಂಭವಿಸಿತು.

four-people-died-in-road-accident
ಮಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವು..

By

Published : Apr 18, 2023, 4:26 PM IST

ಕಡಬ(ಮಂಗಳೂರು):ತೂಫಾನ್ ವಾಹನ ಹಾಗೂ ಆಲ್ಟೋ ಕಾರು ನಡುವೆ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿರುವ ಘಟನೆ ಉಪ್ಪಿನಂಗಡಿ-ಕುಕ್ಕೆ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಆಲ್ಟೋ ಕಾರಿನಲ್ಲಿದ್ದ ಇಬ್ಬರು ಪುರುಷರು, ಓರ್ವ ಮಹಿಳೆ ಮತ್ತು ಒಂದು ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಇವರು ಬೇಲೂರಿನಿಂದ ಕುಕ್ಕೆ ಸುಬ್ರಹ್ಮಣ್ಯದ ಕಡೆಗೆ ಹೋಗುತ್ತಿದ್ದರು ಎಂದು ಹೇಳಲಾಗುತ್ತಿದೆ. ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ವಿವರ ಇನ್ನಷ್ಟೇ ಲಭಿಸಬೇಕಿದೆ.

ಇದನ್ನೂ ಓದಿ:ಪ್ರಾರ್ಥನೆ ಮುಗಿಸಿ ಮರಳುತ್ತಿದ್ದಾಗ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ಸಾವು

ABOUT THE AUTHOR

...view details