ಕರ್ನಾಟಕ

karnataka

ETV Bharat / state

ದ.ಕ. ಜಿಲ್ಲೆಯಲ್ಲಿ ಇಂದು ಕೊರೊನಾಗೆ ನಾಲ್ವರು ಬಲಿ: 131 ಮಂದಿಗೆ ಸೋಂಕು ದೃಢ

ಜಿಲ್ಲೆಯಲ್ಲಿ ಸೋಂಕು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 62 ಮಂದಿ ಇಂದು ಗುಣಮುಖರಾಗಿದ್ದಾರೆ. ಇವರ ಗಂಟಲು ದ್ರವ ಪರೀಕ್ಷೆಯಲ್ಲಿ ಎರಡು ಬಾರಿ ನೆಗೆಟಿವ್ ವರದಿ ಬಂದಿರುವ ಹಿನ್ನೆಲೆಯಲ್ಲಿ ಗುಣಮುಖ ಎಂದು ಘೋಷಿಸಿ ಮನೆಗೆ ಕಳುಹಿಸಲಾಗಿದೆ.

dakshina kannada
dakshina kannada

By

Published : Jul 13, 2020, 11:59 PM IST

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು‌ ಸೋಂಕಿಗೆ ನಾಲ್ವರು ಬಲಿಯಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 50ಕ್ಕೆ ಏರಿದೆ.

ಮೃತ ನಾಲ್ವರೂ ಪುರುಷರಾಗಿದ್ದು, ಇವರಲ್ಲಿ 70 ವರ್ಷದ ವೃದ್ದ ಮಧುಮೇಹ, ಹೃದಯ ಸಂಬಂಧಿ ಹಾಗೂ ನ್ಯೂಮೋನಿಯಾ ಕಾಯಿಲೆಯಿಂದ ಬಳಲುತ್ತಿದ್ದರು. ಮತ್ತೋರ್ವ 70 ವರ್ಷದ ವೃದ್ಧ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. 60 ವರ್ಷದ ವೃದ್ದರೋರ್ವರು ಸಾರಿ ಪ್ರಕರಣಕ್ಕೆ ತುತ್ತಾಗಿ ಮೃತಪಟ್ಟಿದ್ದಾರೆ. 53 ವರ್ಷದ ವೃದ್ಧರೋರ್ವರು ಹೆಪಟೈಟಿಸ್ ನಿಂದ ಬಳಲುತ್ತಿದ್ದರು. ಇವರೆಲ್ಲರೂ ಕೊರೊನಾ ಸೋಂಕು ತಗುಲಿ‌ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇಂದು ದ.ಕ.ಜಿಲ್ಲೆಯಲ್ಲಿ 131 ಮಂದಿಯಲ್ಲಿ ಸೋಂಕು ದೃಢಗೊಂಡಿದೆ. ಇದರಲ್ಲಿ ಅಂತಾರಾಷ್ಟ್ರೀಯ ಪ್ರಯಾಣದಿಂದ ನಾಲ್ವರಲ್ಲಿ ಸೋಂಕು ದೃಢಗೊಂಡಿದ್ದರೆ, ಐಎಲ್​ಐ (Influenza Like Illness) ಪ್ರಕರಣದಲ್ಲಿ 63 ಮಂದಿಗೆ, ಎಸ್​ಎಆರ್​ಐ (Severe Acute Respiratory Influence) ಪ್ರಕರಣದಲ್ಲಿ 10 ಮಂದಿಗೆ, ಪ್ರಾಥಮಿಕ ಸಂಪರ್ಕದಿಂದ 16 ಮಂದಿಯಲ್ಲಿ ಸೋಂಕು ದೃಢಗೊಂಡಿದೆ. ಅದೇ ರೀತಿ 38 ಮಂದಿಯ ಸೋಂಕಿನ ಜಾಡು ಇನ್ನೂ ಪತ್ತೆಯಾಗಿಲ್ಲ. ಇವರೆಲ್ಲರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

62 ಮಂದಿ ಗುಣಮುಖ:

ಜಿಲ್ಲೆಯಲ್ಲಿ ಸೋಂಕು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 62 ಮಂದಿ ಇಂದು ಗುಣಮುಖರಾಗಿದ್ದಾರೆ. ಇವರ ಗಂಟಲು ದ್ರವ ಪರೀಕ್ಷೆಯಲ್ಲಿ ಎರಡು ಬಾರಿ ನೆಗೆಟಿವ್ ವರದಿ ಬಂದಿರುವ ಹಿನ್ನೆಲೆಯಲ್ಲಿ ಗುಣಮುಖ ಎಂದು ಘೋಷಿಸಿ ಮನೆಗೆ ಕಳುಹಿಸಲಾಗಿದೆ.

ಈವರೆಗೆ 24,950 ಮಂದಿಯ ಗಂಟಲು ದ್ರವ ತಪಾಸಣೆ ನಡೆಸಲಾಗಿದ್ದು, 22,589 ಮಂದಿಯಲ್ಲಿ ನೆಗೆಟಿವ್ ವರದಿ ಬಂದಿದೆ. 2,361 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರಲ್ಲಿ 938 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಈವರೆಗೆ 50 ಮಂದಿ ಸಾವನ್ನಪ್ಪಿದ್ದು, 1,467 ಮಂದಿ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ABOUT THE AUTHOR

...view details