ಕರ್ನಾಟಕ

karnataka

ETV Bharat / state

ಬೆಳ್ತಂಗಡಿ: ನಕಲಿ ಆ್ಯಪ್​​ ಮೂಲಕ ಶಿಕ್ಷಕಿಗೆ ಹಣ ವಂಚನೆ.. ಆರೋಪಿ ಬಂಧನ - ನಕಲಿ ಟೆಲಿಗ್ರಾಂ ಖಾತೆ

ಶಿಕ್ಷಕಿಯಿಂದ ಹಣ ಕೊಂಡೊಯ್ಯುವ ಹೊತ್ತಿಗೆ ವೇಣೂರು ಠಾಣೆಯ ಪೊಲೀಸರು ಆರೋಪಿಗೆ ಬಲೆ ಬೀಸಿದ್ದರು.

Accused Ashwath Hebbar
ಆರೋಪಿ ಅಶ್ವತ್ ಹೆಬ್ಬಾರ್

By

Published : Aug 4, 2023, 12:22 PM IST

ಬೆಳ್ತಂಗಡಿ: ಟೆಲಿಗ್ರಾಂ ಆ್ಯಪ್​ನ ನಕಲಿ ಖಾತೆಯ ಮೂಲಕ ಸಂದೇಶ ಕಳುಹಿಸಿ ಒಂದು ಲಕ್ಷ ನಗದು ವಸೂಲಿ ಮಾಡಿದ್ದ ಆರೋಪಿಯನ್ನ ವೇಣೂರು ಪೊಲೀಸರು ಕಾರ್ಯಾಚರಣೆ ನಡೆಸಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ಅಂಟ್ರಿಂಜ ನಿವಾಸಿ ಅಶ್ವತ್ ಹೆಬ್ಬಾರ್ (23) ಪ್ರಕರಣದ ಆರೋಪಿಯಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ನಿವಾಸಿ, ಪೆರೋಡಿತ್ತಾಯಕಟ್ಟೆ ಶಾಲೆಯ ಶಿಕ್ಷಕಿ ಜ್ಯೋತಿ ಅವರಿಗೆ ನಕಲಿ ಟೆಲಿಗ್ರಾಂ ಖಾತೆಯ ಮೂಲಕ ರೂ. ಮೂರು ಲಕ್ಷ ಕೊಡುವಂತೆ ಬೇಡಿಕೆ ಇಟ್ಟು, ಹಣ ನೀಡದೇ ಇದ್ದರೆ ಗಂಡನನ್ನು ಸಾಯಿಸುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಈ ಬಗ್ಗೆ ಜ್ಯೋತಿ ಅವರು ವೇಣೂರು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದರು. ಕಾರ್ಯಾಚರಣೆಗಿಳಿದ ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕಿ ಸೌಮ್ಯ ಜೆ., ಆನಂದ ಎಂ. ಅವರ ತಂಡ ಆಗಸ್ಟ್​ 2ರ ಮಧ್ಯರಾತ್ರಿ ತೆಂಕಕಾರಂದೂರು ಗ್ರಾಮದ ಗುಂಡೇರಿ ಎಂಬಲ್ಲಿಂದ ಬಂಧಿಸಿದ್ದಾರೆ.

3 ಲಕ್ಷದ ಬದಲಿಗೆ ರೂ. ಒಂದು ಲಕ್ಷ ನೀಡುವುದಾಗಿ ಆರೋಪಿಯನ್ನು ಟೆಲಿಗ್ರಾಂನಲ್ಲಿ ಒಪ್ಪಿಸಿ, ಅದರಂತೆ ಆರೋಪಿ ದಿನಾಂಕ ಅಗಸ್ಟ್ 2. ರಂದು ಸಂಜೆ ಅಳದಂಗಡಿ ಕೆದ್ದು ಸಮೀಪ ಹಣವನ್ನು ಎಸೆದು ಹೋಗುವಂತೆ ಸೂಚಿಸಿದ್ದ. ಬಳಿಕ ಅಲ್ಲಿ ಎಸೆಯಬೇಡಿ ಎಂದು ಸಂದೇಶ ರವಾನಿಸಿ ಬೇರೊಂದು ಸ್ಥಳ ಸೂಚಿಸಿದ್ದ. ಹೀಗೆ ಮೂರ್‍ನಾಲ್ಕು ಬಾರಿ ಸ್ಥಳವನ್ನು ಬದಲಾಯಿಸುತ್ತಾ ಮೆಸೇಜ್ ಮಾಡುತ್ತಿದ್ದ ಆರೋಪಿ ಶಿರ್ಲಾಲು ಸವಣಾಲು ಕ್ರಾಸ್ ಬಳಿ ಹಣವನ್ನು ವಾಹನದಿಂದ ಬಿಸಾಡಿ ಹೋಗುವಂತೆ ತಿಳಿಸಿದ್ದ.

ಅದರಂತೆ ಹಣದ ಕಟ್ಟನ್ನು ಬಿಸಾಡಿ ಹೋಗಿದ್ದರು. ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿ ಕಟ್ಟು ಪಡೆದುಕೊಳ್ಳುವಷ್ಟರಲ್ಲಿ ಮೊದಲೇ ಕಾದುಕುಳಿತ್ತಿದ್ದ ಪೊಲೀಸರು ಹಿಡಿಯಲು ಯತ್ನಿಸಿದ್ದಾರೆ. ಆದರೆ, ಅಲ್ಲಿಂದ ಆರೋಪಿ ತಪ್ಪಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದ, ಕ್ಷಿಪ್ರ ಕಾರ್ಯಾಚರಣೆಗಿಳಿದ ಪೊಲೀಸರು ತಡರಾತ್ರಿ ಆತನ ಅಣ್ಣನ ಮನೆ ಗುಂಡೇರಿ ಸಮೀಪ ದಸ್ತಗಿರಿ ಮಾಡಿ, ಆತ ವಸೂಲಿ ಮಾಡಿದ್ದ ಒಂದು ಲಕ್ಷ ನಗದು, ಕೃತ್ಯಕ್ಕೆ ಉಪಯೋಗಿಸಿದ ಬೈಕ್​​ ವಶಕ್ಕೆ ಪಡೆದುಕೊಂಡಿದ್ದಾರೆ.

ವಿದ್ಯುತ್​ ಬಿಲ್​ ಹೆಸರಲ್ಲಿ ವಂಚನೆ: ವಿದ್ಯುತ್​ ಬಿಲ್​ ಹೆಸರಲ್ಲಿ ವ್ಯಕ್ತಿಯೊಬ್ಬರಿಗೆ 2 ಲಕ್ಷ ರೂ ವಂಚನೆ ಮಾಡಿದ್ದ ಪ್ರಕರಣ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದಿತ್ತು. ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಅನಾಮಧೇಯ ವ್ಯಕ್ತಿಯೊಬ್ಬರು ವಿಠಲ್​ ಮಲ್ಯ ರಸ್ತೆಯ ನಿವಾಸಿಯೊಬ್ಬರಿಗೆ ಬೆಸ್ಕಾಂ ಸಿಬ್ಬಂದಿ ಹೆಸರಲ್ಲಿ ಕರೆ ಮಾಡಿ ಬಿಲ್​ ಕಳಿಸಿ, ಬಿಲ್​ ಪಾವತಿಸಿ, ಇಲ್ಲವಾದಲ್ಲಿ ವಿದ್ಯುತ್​ ಕಡಿತಗೊಳಿಸುತ್ತೇವೆ ಎಂದು ಲಿಂಕ್​ ಒಂದನ್ನು ಕಳಿಸಿ, 10 ರೂ ಕಳುಹಿಸುವಂತೆ ಹೇಳಿದ್ದನು. ಅದರಂತೆ 10 ರೂ ಕಳುಹಿಸಿದ್ದ ತಕ್ಷಣ ಖಾತೆಯಲ್ಲಿದ್ದ 2 ಲಕ್ಷ ರೂ ಹಣ ಮಂಗಮಾಯವಾಗಿತ್ತು. ಈ ಬಗ್ಗೆ ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇದನ್ನೂ ಓದಿ:Bengaluru crime: ವಿದ್ಯುತ್ ಬಿಲ್ ಹೆಸರಿನಲ್ಲಿ 2 ಲಕ್ಷ ರೂ. ವಂಚನೆ.. ಪ್ರಕರಣ ದಾಖಲು

ABOUT THE AUTHOR

...view details