ಕರ್ನಾಟಕ

karnataka

ETV Bharat / state

ಬಂಟ್ವಾಳದಲ್ಲಿ ಉಚಿತ ಆಯುಷ್ಮಾನ್ ಕಾರ್ಡ್ ನೋಂದಣಿ, ವಿತರಣೆ - Dakshinakanda news

ಈಗಿನ ಸರ್ಕಾರ ಯಾವುದೇ ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳದೆ, ಕೇವಲ ಸುಳ್ಳು ಹೇಳಿ ಜನರನ್ನು ಮೋಸಗೊಳಿಸುತ್ತಾ ಕಾಲಹರಣ ಮಾಡುತ್ತಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.

Free Ayushman Card Registration, Distribution in Bantwal
ಬಂಟ್ವಾಳದಲ್ಲಿ ಉಚಿತ ಆಯುಷ್ಮಾನ್ ಕಾರ್ಡ್ ನೋಂದಣಿ, ವಿತರಣೆ

By

Published : Aug 30, 2020, 6:25 PM IST

ಬಂಟ್ವಾಳ (ದಕ್ಷಿಣ ಕನ್ನಡ): ಬಂಟ್ವಾಳ ತಾಲೂಕಿನ ಮಾಣಿ ಗಾಂಧಿ ಮೈದಾನದಲ್ಲಿ ಉಚಿತ ಆಯುಷ್ಮಾನ್ ಕಾರ್ಡ್ ನೋಂದಣಿ ಮತ್ತು ವಿತರಣೆ ಕಾರ್ಯಕ್ರಮ ನಡೆಯಿತು.

ಬಂಟ್ವಾಳದಲ್ಲಿ ಉಚಿತ ಆಯುಷ್ಮಾನ್ ಕಾರ್ಡ್ ನೋಂದಣಿ, ವಿತರಣೆ

ಈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ಸರ್ಕಾರದ ಯಾವುದೇ ಯೋಜನೆಗಳು ಅನುಷ್ಠಾನಗೊಂಡರೆ ಸಾಲದು. ಅವುಗಳು ಜನರಿಗೆ ತಲುಪಬೇಕು. ಸಿದ್ದರಾಮಯ್ಯ ನೇತೃತ್ವದ ಹಿಂದಿನ ಸರ್ಕಾರ ಕೈಗೊಂಡ ಜನಪರ ಕಾರ್ಯಕ್ರಮಗಳು ದೇಶಕ್ಕೇ ಮಾದರಿಯಾಗಿತ್ತು. ಆದರೆ, ಈಗಿನ ಸರ್ಕಾರ ಯಾವುದೇ ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳದೆ, ಕೇವಲ ಸುಳ್ಳು ಹೇಳಿ ಜನರನ್ನು ಮೋಸಗೊಳಿಸುತ್ತಾ ಕಾಲಹರಣ ಮಾಡುತ್ತಿದೆ ಎಂದರು.

ಈ ಕಾರ್ಯಕ್ರಮದಲ್ಲಿ 625 ಮಂದಿ ಫಲಾನುಭವಿಗಳಿಗೆ ಆಯುಷ್ಮಾನ್ ಕಾರ್ಡ್ ವಿತರಿಸಲಾಯಿತು.

ABOUT THE AUTHOR

...view details