ಪಿಎಫ್ಐನಿಂದ ಮೂವರು ಸೋಂಕಿತರ ಮೃತದೇಹದ ಅಂತ್ಯಸಂಸ್ಕಾರ - Funeral for Corona infected dead body by PFI
ಕೊರೊನಾ ಸೋಂಕಿನಿಂದ ಮೃತರಾದವರ ಮೃತದೇಹವನ್ನು ಗೌರವಪೂರ್ವಕವಾಗಿ ಅಂತ್ಯಸಂಸ್ಕಾರ ನಡೆಸುತ್ತೇವೆ ಎಂದು ಪಿಎಫ್ಐ ಕಾರ್ಯಕರ್ತರು ಸ್ವಯಂ ಆಗಿ ಮುಂದೆ ಬಂದಿದ್ದಾರೆ.
ಪಿಎಫ್ಐನಿಂದ ಮೂವರು ಕೊರೊನಾ ಸೋಂಕಿತರ ಮೃತ ದೇಹಕ್ಕೆ ಗೌರವಪೂರ್ವಕ ಅಂತ್ಯಸಂಸ್ಕಾರ
ಮಂಗಳೂರು: ಪಿಎಫ್ಐ ಕಾರ್ಯಕರ್ತರ ತಂಡದಿಂದ ದ.ಕ.ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟ ಮೂರು ಮೃತದೇಹಗಳಿಗೆ ಗೌರವಪೂರ್ವಕ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಕೊರೊನಾ ಸೋಂಕಿತರ ಮೃತದೇಹವನ್ನು ಆರೋಗ್ಯ ಕಾರ್ಯಕರ್ತರು ಅಮಾನವೀಯ ರೀತಿಯಲ್ಲಿ ಅಂತ್ಯಸಂಸ್ಕಾರ ನಡೆಸುತ್ತಿರುವುದನ್ನು ಮನಗಂಡು ಪಿಎಫ್ಐ ಕಾರ್ಯಕರ್ತರು ಸೋಂಕಿನಿಂದ ಮೃತರಾದವರ ಮೃತದೇಹವನ್ನು ಗೌರವಪೂರ್ವಕವಾಗಿ ಅಂತ್ಯಸಂಸ್ಕಾರ ನಡೆಸುತ್ತೇವೆ ಎಂದು ಸ್ವಯಂ ಆಗಿ ಮುಂದೆ ಬಂದಿದ್ದಾರೆ.
ಈಗಾಗಲೇ ದಕ. ಹಾಗೂ ಉಡುಪಿ ಜಿಲ್ಲೆಯಾದ್ಯಂತ 25 ತಂಡಗಳನ್ನು ರಚಿಸಲಾಗಿದ್ದು, ಒಂದು ತಂಡದಲ್ಲಿ 8 ಮಂದಿ ಇದ್ದು, ಇವರೆಲ್ಲರಿಗೂ ಕೋವಿಡ್ ಸೋಂಕಿತರ ಅಂತ್ಯಸಂಸ್ಕಾರ ನಡೆಸುವ ಬಗ್ಗೆ ತರಬೇತಿ ನೀಡಲಾಗಿದೆ. ಧಾರ್ಮಿಕ ವಿಧಿ-ವಿಧಾನಗಳಿಗೆ ಪೂರಕವಾಗಿ ಅಂತ್ಯಸಂಸ್ಕಾರ ನಡೆಸುವ ಫಿಎಫ್ಐ ಕಾರ್ಯಕರ್ತರು, ದ.ಕ.ಜಿಲ್ಲೆಯಲ್ಲಿ ಈಗಾಗಲೇ 10 ಸೋಂಕಿತರ ಮೃತದೇಹಗಳ ಅಂತ್ಯಸಂಸ್ಕಾರ ನೆರವೇರಿಸಿದ್ದು, ಇದೀಗ ಮತ್ತೆ ಮೂರು ಮೃತದೇಹಗಳನ್ನು ಗೌರವಪೂರ್ವಕವಾಗಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.
TAGGED:
ಮಂಗಳೂರು