ಮಂಗಳೂರು: ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಬಲಿಯಾದ ವೃದ್ಧೆಯ ಅಂತ್ಯಸಂಸ್ಕಾರವು ನಗರದ ಬೋಳೂರು ವಿದ್ಯುತ್ ಚಿತಾಗಾರದಲ್ಲಿ ನಡೆಯಿತು.
ಕೊರೊನಾಕ್ಕೆ ವೃದ್ಧೆ ಬಲಿ: ಬೋಳೂರು ವಿದ್ಯುತ್ ಚಿತಾಗಾರದಲ್ಲಿ ನೆರವೇರಿದ ಅಂತ್ಯಸಂಸ್ಕಾರ - Kovid Hospital in Mangalore
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಹಿಂದೆ ಮೃತಪಟ್ಟ ಕೋವಿಡ್ ಸೋಂಕಿತರ ಅಂತ್ಯಸಂಸ್ಕಾರವನ್ನು ನೆರವೇರಿಸಲು ಸಾರ್ವಜನಿಕರು ಅಡ್ಡಿಪಡಿಸಿರುವ ಹಿನ್ನೆಲೆ ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಬಲಿಯಾದ ವೃದ್ಧೆಯ ಅಂತ್ಯಸಂಸ್ಕಾರವು ನಗರದ ಬೋಳೂರು ವಿದ್ಯುತ್ ಚಿತಾಗಾರದಲ್ಲಿ ನಡೆಸಲಾಯಿತು.
ನಗರದ ಕುಲಶೇಖರ ನಿವಾಸಿಯಾಗಿರುವ 80 ವರ್ಷದ ವೃದ್ಧೆಯು ಪಾರ್ಶ್ವವಾಯು ಪೀಡಿತೆಯಾಗಿ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂದರ್ಭ ಸೋಂಕು ತಗುಲಿತ್ತು. ಬಳಿಕ ಇವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ನಿನ್ನೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಈ ಹಿಂದೆ ಮೃತಪಟ್ಟ ಕೋವಿಡ್ ಸೋಂಕಿತರ ಅಂತ್ಯಸಂಸ್ಕಾರವನ್ನು ನೆರವೇರಿಸಲು ಸಾರ್ವಜನಿಕರು ಅಡ್ಡಿಪಡಿಸಿರುವ ಹಿನ್ನೆಲೆ ಜಿಲ್ಲಾಡಳಿತ ಕೊರೋನಾ ಸೋಂಕಿನಿಂದ ಮೃತಪಟ್ಟವರನ್ನು ಬೋಳೂರು ವಿದ್ಯುತ್ ಚಿತಾಗಾರದಲ್ಲಿಯೇ ಅಂತ್ಯಸಂಸ್ಕಾರ ನೆರವೇರಿಸಲು ನಿರ್ಧರಿಸಿದೆ.