ಮಂಗಳೂರು: ನವ ಮಂಗಳೂರು ಬಂದರು ಬಳಿ ಅರಬ್ಬಿ ಸಮುದ್ರದಲ್ಲಿ ನಡೆದ ಬೋಟ್ ದುರಂತದಲ್ಲಿ ಮೃತಪಟ್ಟ ಪ. ಬಂಗಾಳ ಮೂಲದ ಇಬ್ಬರು ಮೀನುಗಾರರ ಅಂತ್ಯಕ್ರಿಯೆಯನ್ನು ಮಂಗಳೂರಿನ ನಂದಿಗುಡ್ಡೆಯ ಸ್ಮಶಾನದಲ್ಲಿ ನಡೆಸಲಾಯಿತು.
ದುರಂತದಲ್ಲಿ ಮೃತಪಟ್ಟ ಮೀನುಗಾರರಾದ ಸುಬಲ್ ದಾಸ್ ಹಾಗೂ ಸುಬುಲ್ ದಾಸ್ ಕುಟುಂಬ ಆರ್ಥಿಕವಾಗಿ ದುರ್ಬಲರಾಗಿದ್ದಾರೆ. ಮಂಗಳೂರಿನಿಂದ ಪಶ್ಚಿಮ ಬಂಗಾಳಕ್ಕೆ ಮೃತದೇಹ ಕೊಂಡೊಯ್ಯುವಷ್ಟು ಶಕ್ತರಾಗಿಲ್ಲ. ಆದ್ದರಿಂದ ಮೃತದೇಹಕ್ಕೆ ಮಂಗಳೂರಿನಲ್ಲಿಯೇ ಅಂತ್ಯಸಂಸ್ಕಾರ ನಡೆಸಲಾಯಿತು ಎಂದು ತಿಳಿದು ಬಂದಿದೆ.