ಪುತ್ತೂರು: ಇಲ್ಲಿನ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ತರಗತಿ ಆರಂಭಕ್ಕೂ ಮುನ್ನ ಸರಸ್ವತಿ ಪೂಜೆ ಮತ್ತು ಗಣಹೋಮ ಕಾರ್ಯಕ್ರಮ ಆಯೋಜಿಸಲಾಗಿತ್ತು.
"ಯಾವುದೇ ಒಂದು ವಿದ್ಯಾಸಂಸ್ಥೆ ಅಥವಾ ವಿದ್ಯಾರ್ಥಿಯು ಬೆಳಗಬೇಕಾದರೆ ತನ್ನೊಳಗಿರುವ ಅಂತಃಶಕ್ತಿಯನ್ನು ತೋರಿಸಬೇಕು. ಇದಕ್ಕೆ ವಿದ್ಯಾ ದೇವತೆಯಾದ ಸರಸ್ವತಿಯ ಅನುಗ್ರಹ ಅತ್ಯಗತ್ಯ. ಈ ದಿಶೆಯಲ್ಲಿ ವಿವೇಕಾನಂದ ಪದವಿಪೂರ್ವ ವಿದ್ಯಾಲಯ ಪ್ರತಿವರ್ಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಂಡು ಬರುತ್ತಿದೆ. ಭಗವಂತನ ಆಶೀರ್ವಾದದಿಂದ ಸತ್ಕಾರ್ಯಗಳು ಕೈಗೂಡುತ್ತಿವೆ. ಈ ಮೂಲಕ ಎಲ್ಲರಿಗೂ ಆಯುರಾರೋಗ್ಯ ಮತ್ತು ಸುಖ, ಶಾಂತಿ, ನೆಮ್ಮದಿ ಲಭಿಸಲಿ. ಈ ಮೂಲಕ ಸಂಸ್ಥೆಯಲ್ಲಿ ಕಲಿಯುತ್ತಿರುವ ಎಲ್ಲರಿಗೂ ಆ ಸರಸ್ವತಿಯ ಅನುಗ್ರಹವು ಪ್ರಾಪ್ತಿಯಾಗಲಿ." ಎಂದು ಕಶೆಕೋಡಿ ಕಾರ್ತಿಕ್ ಶಾಸ್ತ್ರಿ ಶುಭ ಹಾರೈಸಿದರು.