ಮಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆ ಬೆಂಕಿಗಾಹುತಿಯಾದ ಘಟನೆ ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮದ ಗುಂಡ್ಯ ಎಂಬಲ್ಲಿ ನಡೆದಿದೆ.
ಗ್ಯಾಸ್ ಸಿಲಿಂಡರ್ ಸ್ಫೋಟ: ಮನೆ ಬೆಂಕಿಗಾಹುತಿ - Mangalore News
ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆ ಬೆಂಕಿಗಾಹುತಿಯಾದ ಘಟನೆ ಮಂಗಳೂರಿನ ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮದ ಗುಂಡ್ಯ ಎಂಬಲ್ಲಿ ನಡೆದಿದೆ. ಸ್ಪೋಟದ ರಭಸಕ್ಕೆ ಮನೆಯಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಕರಕಲಾಗಿದೆ.

ಗ್ಯಾಸ್ ಸಿಲಿಂಡರ್ ಸ್ಪೋಟ
ಗ್ಯಾಸ್ ಸಿಲಿಂಡರ್ ಸ್ಪೋಟ
ಗುಂಡ್ಯ ಗ್ರಾಮದ ಕೃಷ್ಣ ಎಂಬುವರ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡಿದೆ. ಘಟನೆ ಸಂಭವಿಸಿದಾಗ ಮನೆಯಲ್ಲಿ ಯಾರೂ ಇಲ್ಲದೇ ಇದ್ದುದರಿಂದ ಸಂಭವಿಸಬಹುದಾದ ದೊಡ್ಡ ದುರಂತವೊಂದು ತಪ್ಪಿದೆ. ಸ್ಪೋಟದ ರಭಸಕ್ಕೆ ಮನೆಯಲ್ಲಿದ್ದ ವಸ್ತುಗಳೆಲ್ಲಾ ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಸುಳ್ಯ ಅಗ್ನಿಶಾಮಕ ದಳದ ಪ್ರಭಾರ ಠಾಣಾಧಿಕಾರಿ ವಿಶ್ವನಾಥ ಪೂಜಾರಿ ಹಾಗೂ ಸಿಬ್ಬಂದಿ ಆಗಮಿಸಿ ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿ ನಂದಿಸಿದ್ದಾರೆ.