ಕಡಬ (ದಕ್ಷಿಣ ಕನ್ನಡ): ತಾಲೂಕಿನ ಬಲ್ಯ ಗ್ರಾಮದ ಕೆರೆನಡ್ಕ ಧರ್ಣಪ್ಪಗೌಡ ಎಂಬುವರ ಮನೆಯಲ್ಲಿ ಗುರುವಾರ ರಾತ್ರಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅಪಾರ ನಷ್ಟವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಗ್ಯಾಸ್ ಸಿಲಿಂಡರ್ ಸ್ಫೋಟ: ಪ್ರಾಣಾಪಾಯದಿಂದ ಪಾರಾದ ಕುಟುಂಬಸ್ಥರು - Dakshina Kannada district news
ಕಡಬ ತಾಲೂಕಿನ ಬಲ್ಯ ಗ್ರಾಮದ ಕೆರೆನಡ್ಕ ಧರ್ಣಪ್ಪಗೌಡ ಎಂಬುವರ ಮನೆಯಲ್ಲಿ ಗುರುವಾರ ರಾತ್ರಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅಪಾರ ನಷ್ಟವಾಗಿದೆ.
Gas explore
ಘಟನೆಯಿಂದ ಮನೆಯ ಛಾವಣಿಗೆ ಭಾಗಶಃ ಹಾನಿಯಾಗಿದೆ. ಗೋಡೆಗಳು ಬಿರುಕು ಬಿಟ್ಟಿವೆ. ಕೋಣೆಯಲ್ಲಿದ್ದ ವಸ್ತುಗಳಿಗೂ ಹಾನಿಯಾಗಿದೆ. ಅದೃಷ್ಟವಶಾತ್ ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.