ಕರ್ನಾಟಕ

karnataka

ETV Bharat / state

ಉಪ್ಪಿನಂಗಡಿ ಸಮೀಪ ಗ್ಯಾಸ್ ಟ್ಯಾಂಕರ್ ಪಲ್ಟಿ: ಮುನ್ನೆಚ್ಚರಿಕಾ ಕ್ರಮವಾಗಿ ಹೆದ್ದಾರಿ ಬಂದ್ - ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ

ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪ ಗ್ಯಾಸ್ ಟ್ಯಾಂಕರ್​ ಪಲ್ಟಿಯಾಗಿದೆ.

Gas Tanker Pilti near Uppinagadi:Gas leakaged
ಉಪ್ಪಿನಂಗಡಿ ಸಮೀಪ ಗ್ಯಾಸ್ ಟ್ಯಾಂಕರ್ ಪಲ್ಟಿ: ಗ್ಯಾಸ್ ಸೋರಿಕೆ.ರಸ್ತೆ ತಡೆ

By

Published : Mar 28, 2020, 10:49 AM IST

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್​ ಪಲ್ಟಿಯಾದ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪ ಬೆದ್ರೋಡಿ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದೆ.

ಉಪ್ಪಿನಂಗಡಿ ಸಮೀಪ ಗ್ಯಾಸ್ ಟ್ಯಾಂಕರ್ ಪಲ್ಟಿ

ಗ್ಯಾಸ್ ಟ್ಯಾಂಕರ್ ಹೆದ್ದಾರಿಗೆ ಅಡ್ಡ ಬಿದ್ದುದರಿಂದ ಗ್ಯಾಸ್ ಸೋರಿಕೆ ಉಂಟಾಗಿದ್ದು, ಉಪ್ಪಿನಂಗಡಿಯಲ್ಲಿದ್ದ HPCL ಕಂಪನಿಯ ತುರ್ತು ಪರಿಸ್ಥಿತಿ ವಾಹನದವರು ಸ್ಥಳಕ್ಕೆ ಧಾವಿಸಿ ಗ್ಯಾಸ್ ಸೋರಿಕೆ ತಡೆಗಟ್ಟಲು ವ್ಯವಸ್ಥೆ ಮಾಡಿದ್ದಾರೆ.

ರಾಜ್ಯ ಬಂದ್ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಹೆಚ್ಚಿನ ವಾಹನಗಳು ಬರುತ್ತಿಲ್ಲವಾದರೂ ಸುರಕ್ಷತಾ ಹಿನ್ನೆಲೆಯಲ್ಲಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

ABOUT THE AUTHOR

...view details