ಕರ್ನಾಟಕ

karnataka

ETV Bharat / state

ಗುಂಡ್ಯ ಸಮೀಪ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಪಾಯದಿಂದ ಪಾರಾದ ಚಾಲಕ - Nelyadi accident news

ನೆಲ್ಯಾಡಿಯ ಗುಂಡ್ಯ ಸಮೀಪ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಬಿದ್ದಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ.

Gas tanker pulty
ಗ್ಯಾಸ್ ಟ್ಯಾಂಕರ್ ಪಲ್ಟಿ

By

Published : May 16, 2020, 9:28 AM IST

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಬಿದ್ದಿದ್ದು, ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ.

ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದರೂ ಗ್ಯಾಸ್ ಸೋರಿಕೆ ಆಗಿಲ್ಲ ಎಂದು ತಿಳಿದು ಬಂದಿದೆ. ರಸ್ತೆಯ ಬದಿಗೆ ಟ್ಯಾಂಕರ್ ಬಿದ್ದಿರುವುದರಿಂದ ರಸ್ತೆ ಸಂಚಾರಕ್ಕೆ ಕೂಡ ತೊಂದರೆ ಆಗಿಲ್ಲ.

ಇನ್ನು ಸ್ಥಳಕ್ಕೆ ಉಪ್ಪಿನಂಗಡಿ, ನೆಲ್ಯಾಡಿ ಪೊಲೀಸರು, ಅಗ್ನಿಶಾಮಕ ದಳದವರು, ಗ್ಯಾಸ್ ತುರ್ತು ಸ್ಥಿತಿ ನಿವಾರಣೆ ವಾಹನ ಆಗಮಿಸಿದ್ದು, ತೆರವು ಕಾರ್ಯಾಚರಣೆ ನಡೆಯುತ್ತಿದೆ‌.

ABOUT THE AUTHOR

...view details