ಬಂಟ್ವಾಳ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಆತೀಕ್, ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮ ಪಂಚಾಯತಿ ಕಚೇರಿಗೆ ಭೇಟಿ ನೀಡಿದರು.
ಸಜಿಪನಡು ಗ್ರಾಪಂ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ರಾಜ್ಯ ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ - Bantwal appreciated the work news
ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ನಡೆಸಿದ ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭ ನರೇಗಾ ಯೋಜನೆಯಲ್ಲಿ ಹಾಗೂ 14ನೇ ಹಣಕಾಸು ಯೋಜನೆಯಡಿ ಅಭಿವೃದ್ಧಿಯಾದ ವಿವಿಧ ಪ್ರದೇಶ, ಸಜಿಪನಡು ಗ್ರಾಮದ ಕಂಚಿನಡ್ಕಪದವು ಹಿಂದೂ ರುದ್ರಭೂಮಿ ಹಾಗೂ ಸಜಿಪನಡು ಗ್ರಾಮದ ನಳ್ಳಿ ನೀರು ಸಂಪರ್ಕ ಹೊಂದಿದ ಕೆಲ ಮನೆಗಳಿಗೂ ಅವರು ಭೇಟಿ ನೀಡಿದರು.
ಗ್ರಾಮ ಪಂಚಾಯತ್ನಿಂದಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮತ್ತು ಗ್ರಾಮ ಪಂಚಾಯತ್ ಕಟ್ಟಡ ಕಾಮಗಾರಿಯ ಕುರಿತಾಗಿ ಮೆಚ್ಚುಗೆ ವ್ಯಕ್ತಪಡಿಸಿದರು. ದ.ಕ ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಸೆಲ್ವಮಣಿ, ಗ್ರಾಮೀಣ ಕುಡಿಯುವ ನೀರು ಇಲಾಖೆಯ ಎಂಜಿನಿಯರ್ ನರೇಂದ್ರ ಬಾಬು, ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ಗ್ರಾಮ ಪಂಚಾಯತ್ ಅಧ್ಯಕ್ಷ ಮೊಹಮ್ಮದ್ ನಾಸೀರ್, ಸದಸ್ಯ ಎಸ್.ಎನ್.ಅಬ್ದುಲ್ ರಹಿಮಾನ್, ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಯಶವಂತ ದೇರಾಜೆ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.