ಬಂಟ್ವಾಳ:ವಿಟ್ಲ ದೇವಸ್ಥಾನ ಸಮೀಪ ಕೆರೆಯೊಂದಕ್ಕೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳೀಯ ನೆತ್ರಕೆರೆ ನಿವಾಸಿ ನಿಶ್ಮಿತಾ (22) ಸಾವನ್ನಪ್ಪಿದವರು.
ಈಕೆ ಡೆತ್ ನೋಟ್ ಮತ್ತು ಮೊಬೈಲ್ ಅನ್ನು ಕೆರೆ ಬದಿಯಲ್ಲಿಟ್ಟು ಸಾವನ್ನಪ್ಪಿದ್ದಾಗಿ ಹೇಳಲಾಗಿದ್ದು, ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಶ್ಮಿತಾ ಸ್ಥಳೀಯ ಡೆಂಟಲ್ ಕ್ಲಿನಿಕ್ ಕೆಲಸ ನಿರ್ವಹಿಸುತ್ತಿದ್ದು, ನಿನ್ನೆ ಸಂಜೆಯಿಂದ ಕಾಣೆಯಾಗಿದ್ದರು. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ಅ.11ರಂದು ಮುಂಜಾನೆ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಡೆತ್ ನೋಟ್ ಮತ್ತು ಮೊಬೈಲ್ ಕೂಡ ಮೃತದೇಹ ದೊರೆತ ಸ್ಥಳದಲ್ಲಿ ಪತ್ತೆಯಾಗಿದೆ. ಡೆತ್ನೋಟ್ನಲ್ಲಿ ಕೆಲವರ ಹೆಸರು ಉಲ್ಲೇಖವಿದೆ ಎನ್ನಲಾಗಿದೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯಾವ ಕಾರಣಕ್ಕಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತನಿಖೆಯ ಬಳಿಕವಷ್ಟೇ ತಿಳಿದು ಬರಬೇಕಿದೆ.