ಕರ್ನಾಟಕ

karnataka

ETV Bharat / state

ಬಾಲಕಿ ಅಪಹರಣ, ಅತ್ಯಾಚಾರ ಪ್ರಕರಣ : ಸಾಕ್ಷ್ಯಾಧಾರ ಕೊರತೆಯಿಂದ ಆರೋಪಿ ಖುಲಾಸೆ - ಪರಿಶಿಷ್ಟ ಸಮುದಾಯ

ಬಾಲಕಿ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷ್ಯಾಧಾರ ಕೊರತೆಯಿಂದ ಆರೋಪಿಯನ್ನು ಖುಲಾಸೆಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

girl-rape-case-accused-acquitted-due-to-lack-of-evidence
ಬಾಲಕಿ ಅಪಹರಣ ಮತ್ತು ಅತ್ಯಾಚಾರ ಪ್ರಕರಣ : ಸಾಕ್ಷ್ಯಾಧಾರ ಕೊರತೆಯಿಂದ ಆರೋಪಿ ಖುಲಾಸೆ

By ETV Bharat Karnataka Team

Published : Dec 23, 2023, 1:34 PM IST

ಮಂಗಳೂರು :ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ ಮಂಗಳೂರಿನ ದ.ಕ. ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಮೊದಲನೇ ಫಾಸ್ಟ್‌ಟ್ಯಾಕ್) ಆರೋಪಿಯನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿದೆ. ಎಂ ಡಿ ಇಬ್ರಾರ್ ಅಲಿಯಾಸ್ ಮುನ್ನ ಖುಲಾಸೆಗೊಂಡ ಆರೋಪಿ.

ಇಬ್ರಾರ್ ವಿರುದ್ದ ನೊಂದ ಬಾಲಕಿ ನೀಡಿದ್ದ ದೂರಿನಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 2019ರ ಮಾರ್ಚ್‌ನಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆರೋಪಿಯನ್ನು ಉಳ್ಳಾಲ ಠಾಣೆ ಪೊಲೀಸರು ದಸ್ತಗಿರಿ ಮಾಡಿ ಕಾನೂನು ಕ್ರಮವನ್ನು ಕೈಗೊಂಡಿದ್ದರು. ಬಳಿಕ ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡು, 16 ಸಾಕ್ಷಿಗಳ ವಿಚಾರಣೆ ನಡೆಸಿತ್ತು.

ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುಳ ಇಟ್ಟಿ ಅವರು ಡಿ. 19ರಂದು ಆರೋಪಿ ವಿರುದ್ಧ ಸೂಕ್ತ ಸಾಕ್ಷ್ಯಾಧಾರವಿಲ್ಲದ ಕಾರಣ ಪ್ರಕರಣವನ್ನು ಖುಲಾಸೆಗೊಳಿಸಿ ತೀರ್ಪು ನೀಡಿದ್ದಾರೆ. ಆರೋಪಿ ಪರ ವಕೀಲರಾದ ರಾಘವೇಂದ್ರ ರಾವ್, ಗೌರಿ ಶೆಣೈ ಮತ್ತು ನವ್ಯಾ ಸಚಿನ್ ವಾದಿಸಿದ್ದರು.

ಅತ್ಯಾಚಾರ ಆರೋಪಿಗೆ 20 ವರ್ಷ ಶಿಕ್ಷೆ: ವಿವಾಹಿತ ಮಹಿಳೆಯನ್ನು ಮದುವೆಯಾಗಿ ಬಳಿಕ ಆಕೆಯ ಮಗಳ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿಗೆ ದಾವಣಗೆರೆ ಜಿಲ್ಲೆಯ ಮಕ್ಕಳಸ್ನೇಹಿ ಮತ್ತು ಎಫ್.ಟಿ.ಎಸ್.ಸಿ-1 ನ್ಯಾಯಾಲಯವು 20 ವರ್ಷ ಜೈಲು ಶಿಕ್ಷೆ ಹಾಗೂ 22,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿತ್ತು.

ಆರೋಪಿಯು ಸಂತ್ರಸ್ತೆಯ ತಾಯಿಯನ್ನು ಫೋನ್ ಕರೆ ಮೂಲಕ ಪರಿಚಯ ಮಾಡಿಕೊಂಡಿದ್ದ. ಬಳಿಕ ಇಬ್ಬರು ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು. ಮದುವೆಯಾದ ಒಂದೂವರೆ ವರ್ಷದ ನಂತರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆರೋಪಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದನು. ಅಲ್ಲದೆ ಆಕೆಯನ್ನು ಪ್ರೀತಿಸುವುದಾಗಿ ಹೇಳಿ ಅತ್ಯಾಚಾರ ಮಾಡಿದ್ದನು.

ಈ ವಿಚಾರ ತಾಯಿಗೆ ತಿಳಿದಿದ್ದು, ತನ್ನ ಅಣ್ಣನ ಮಗನೊಂದಿಗೆ ಮಗಳ ಮದುವೆ ಮಾಡಲು ನಿಶ್ಚಯಿಸಿದ್ದರು. ಆದರೆ ಇದು ಅಪರಾಧಿಗೆ ಇಷ್ಟವಿಲ್ಲದೇ ಇದ್ದುದರಿಂದ ಬಾಲಕಿಯ ತಾಯಿಯೊಂದಿಗೆ ಗಲಾಟೆ ಮಾಡಿದ್ದನು. ಬಳಿಕ 11/3/2020ರ ರಾತ್ರಿ ಆಕೆಯನ್ನು ಗ್ರಾಮವೊಂದಕ್ಕೆ ಕರೆದುಕೊಂಡು ಹೋಗಿ ಬಾಡಿಗೆ ಮನೆಯಲ್ಲಿ ತಾಳಿ ಕಟ್ಟಿ ಮದುವೆಯಾಗಿದ್ದ. ಬಳಿಕ ಹಲವು ಬಾರಿ ಅತ್ಯಾಚಾರವೆಸಗಿದ ಪರಿಣಾಮ ಆಕೆ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ್ದಳು. ಈ ಸಂಬಂಧ 2021ರಲ್ಲಿ ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇದನ್ನು ಓದಿ :ಮೈಸೂರು: ಅಪ್ರಾಪ್ತ ನಾದಿನಿ ಮೇಲೆ ಅತ್ಯಾಚಾರ, ಅಪರಾಧಿಗೆ 25 ವರ್ಷ ಶಿಕ್ಷೆ

ABOUT THE AUTHOR

...view details