ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ಪ್ರತ್ಯೇಕ ಪ್ರಕರಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1.36 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಓರ್ವ ಮಹಿಳಾ ಪ್ರಯಾಣಿಕೆ ಸೇರಿದಂತೆ ಇಬ್ಬರು ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದರು.
ಆರೋಪಿಗಳ ಬಳಿ 24 ಕ್ಯಾರೆಟ್ ಪರಿಶುದ್ಧತೆಯ 1.36 ಕೋಟಿ ರೂ. ಮೌಲ್ಯದ ಚಿನ್ನ ಪತ್ತೆಯಾಗಿದೆ. ಚಿನ್ನ ಮತ್ತು ಪ್ರಯಾಣಿಕರನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.