ಕರ್ನಾಟಕ

karnataka

ETV Bharat / state

ಆಟಿಕೆ ವಸ್ತುಗಳಲ್ಲಿ ಅಡಗಿಸಿ ಚಿನ್ನ ಸಾಗಾಟ : ಮಂಗಳೂರು ಏರ್​ಪೋರ್ಟ್​​ನಲ್ಲಿ 300 ಗ್ರಾಂ ಬಂಗಾರ ವಶ - shipping in toy items

ದುಬಾಯ್​ನಿಂದ ಸ್ಪೈಸ್ ಜೆಟ್ ವಿಮಾನದಲ್ಲಿ ಮಂಗಳೂರಿಗೆ ಬಂದಿದ್ದ. ಈತನನ್ನು ತಪಾಸಣೆಗೆ ಒಳಪಡಿಸಿದಾಗ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ..

ಚಿನ್ನ
ಚಿನ್ನ

By

Published : Apr 19, 2021, 3:46 PM IST

ಮಂಗಳೂರು :ಮಂಗಳೂರು ವಿಮಾನ ನಿಲ್ದಾಣದಲ್ಲಿ ಆಟಿಕೆ ಸೇರಿದಂತೆ ವಿವಿಧ ವಸ್ತುಗಳಲ್ಲಿ ಅಡಗಿಸಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದವನನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಆರಿಷ್ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿ. ಈತ ನಿನ್ನೆ ದುಬಾಯ್​ನಿಂದ ಸ್ಪೈಸ್ ಜೆಟ್ ವಿಮಾನದಲ್ಲಿ ಮಂಗಳೂರಿಗೆ ಬಂದಿದ್ದ. ಈತನನ್ನು ತಪಾಸಣೆಗೆ ಒಳಪಡಿಸಿದಾಗ ಟಾಯ್ಸ್, ಟ್ರಿಮ್ಮರ್, ವಾಟರ್ ಡಿಸ್ಪೆನ್ಸರ್ ಮತ್ತು ಜ್ಯೂಸ್​ನಲ್ಲಿ ಅಡಗಿಸಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಮಂಗಳೂರಿನಲ್ಲಿ ಏರ್​ಪೋರ್ಟ್​​ನಲ್ಲಿ ಅಕ್ರಮವಾಗಿ ಸಾಗಿಸ್ತಿದ್ದ 300 ಗ್ರಾಂ ಚಿನ್ನ ವಶ

ಇದರಲ್ಲಿ 300 ಗ್ರಾಂ ಚಿನ್ನ ಸಿಕ್ಕಿದ್ದು ಇದರ ಮೌಲ್ಯ ರೂ 14.55 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಮಂಗಳೂರು ಕಸ್ಟಮ್ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಮುಂದುವರಿಸಿದ್ದಾರೆ.

ABOUT THE AUTHOR

...view details