ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಮೇ ತಿಂಗಳಲ್ಲಿ ಒಟ್ಟು ₹ 1.87 ಕೋಟಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮೇ ತಿಂಗಳಲ್ಲಿ ಒಟ್ಟು 7 ಚಿನ್ನ ಅಕ್ರಮ ಸಾಗಣೆ ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ ಹೆಚ್ಚಿನ ಪ್ರಕರಣಗಳು ಚಿನ್ನ ಪೇಸ್ಟ್ ರೂಪಕ್ಕೆ ತಂದು ಗುದನಾಳದಲ್ಲಿ ಬಚ್ಚಿಟ್ಟುಕೊಂಡು ಅಕ್ರಮವಾಗಿ ಸಾಗಿಸುತ್ತಿದ್ದವೇ ಆಗಿವೆ.
ಮಂಗಳೂರು ಏರ್ಪೋರ್ಟ್ನಲ್ಲಿ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ಒಂದೇ ತಿಂಗಳಲ್ಲಿ ವಶಕ್ಕೆ ಪಡೆದ ಚಿನ್ನದ ಮೌಲ್ಯವೆಷ್ಟು? - ಚಿಕ್ಕ ಅಕ್ರಮ ಸಾಗಾಟ ಸಂಬಂಧ ಮೇ ತಿಂಗಳಲ್ಲಿ 1 87 ಕೋಟಿ ಮೌಲ್ಯದ ಚಿನ್ನ ವಶ
ಅಕ್ರಮವಾಗಿ ಸಾಗಿಸುತ್ತಿದ್ದ 24 ಕ್ಯಾರೆಟ್ ಪರಿಶುದ್ಧತೆಯ 3.64 ಕೆ ಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ರೂಪಾಯಿ 1.87 ಕೋಟಿ ಎಂದು ಅಂದಾಜಿಸಲಾಗಿದೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ
ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 24 ಕ್ಯಾರೆಟ್ ಪರಿಶುದ್ಧತೆಯ 3.64 ಕೆ ಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ರೂಪಾಯಿ 1.87 ಕೋಟಿ ಎಂದು ಅಂದಾಜಿಸಲಾಗಿದೆ. ಒಟ್ಟು 5 ಮಂದಿಯನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಪಠ್ಯದಿಂದ ಅಧ್ಯಾಯ ಕೈಬಿಡಿ ಎನ್ನುವುದು ಕಾಂಗ್ರೆಸ್‌ನಿಂದ ಉಪಕೃತರಾದ ಕೆಲವರ ನಾಟಕ: ಪ್ರತಾಪ್ ಸಿಂಹ