ಮಂಗಳೂರು: ಚಪ್ಪಲಿಯಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ವ್ಯಕ್ತಿಯೊಬ್ಬ ಇಂದು ಸ್ಪೈಸ್ ಜೆಟ್ ವಿಮಾನದಲ್ಲಿ ದುಬೈನಿಂದ ಮಂಗಳೂರಿಗೆ ಬಂದಿದ್ದು, ಈತನನ್ನು ತಪಾಸಣೆಗೊಳಪಡಿಸಿದಾಗ ಧರಿಸಿರುವ ಚಪ್ಪಲಿಯಲ್ಲಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ಚಪ್ಪಲಿಯಲ್ಲಿ ಅಕ್ರಮ ಚಿನ್ನಸಾಗಾಟ: 17.43 ಲಕ್ಷ ರೂ ಮೌಲ್ಯದ ಚಿನ್ನ ವಶ
ದುಬೈನಿಂದ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿದ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ತಪಾಸಣೆಗೊಳಪಡಿಸಿದಾಗ ಚಪ್ಪಲಿಯಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದ್ದು, ವ್ಯಕ್ತಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಚಪ್ಪಲಿಯಲ್ಲಿ ಅಕ್ರಮ ಚಿನ್ನಸಾಗಾಟ : 17.43 ಲಕ್ಷ ರೂ ಮೌಲ್ಯದ ಚಿನ್ನ ವಶ
ಚಿನ್ನವನ್ನು ಪೇಸ್ಟ್ ರೂಪದಲ್ಲಿ ಚಪ್ಪಲಿಯೊಳಗೆ ಅಡಗಿಸಿಟ್ಟು ಈತ ಪ್ರಯಾಣ ಮಾಡುತ್ತಿದ್ದ. ಈತನಿಂದ ಸುಮಾರು 17,43,000 ರೂ. ಮೌಲ್ಯದ 332 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಕಸ್ಟಮ್ಸ್ ಅಧಿಕಾರಿಗಳು ಈ ಸಂಬಂಧ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ :ಆನೆ ದಂತ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ