ಮಂಗಳೂರು: ನಗರದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳವಾರ ವಶಪಡಿಸಿಕೊಂಡು, ಓರ್ವನನ್ನು ಬಂಧಿಸಿದ್ದಾರೆ. ಕೇರಳದ ಕಾಸರಗೋಡು ಮೂಲದ ವ್ಯಕ್ತಿ ಬಂಧಿತ ಆರೋಪಿ.
ದುಬೈನಿಂದ ಆಗಮಿಸಿರುವ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಮಂಗಳವಾರ ನಸುಕಿನ ಜಾವ 2 ಗಂಟೆ ಸುಮಾರಿಗೆ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾನೆ. ಈ ವೇಳೆ ಅಧಿಕಾರಿಗಳು ಆತನನ್ನು ತಪಾಸಣೆ ನಡೆಸಿದಾಗ 364 ಗ್ರಾಂ ತೂಕದ 17.54 ಲಕ್ಷ ರೂ. ಮೌಲ್ಯದ ಶುದ್ಧ ಚಿನ್ನವು ದ್ರವರೂಪದಲ್ಲಿ ದೊರೆತಿದೆ.