ಕರ್ನಾಟಕ

karnataka

ETV Bharat / state

ಮಂಗಳೂರು ವಿಮಾನ ನಿಲ್ದಾಣದಲ್ಲಿ 2 ಕೋಟಿ ರೂ ಮೌಲ್ಯದ ಚಿನ್ನ​ ವಶ - Gold seized at Mangalore airport

ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ನಾಲ್ವರು ಪ್ರಯಾಣಿಕರಿಂದ ಎರಡು ಕೋಟಿ ರೂ ಮೌಲ್ಯದ ಚಿನ್ನವನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ​ ವಶಪಡಿಸಿಕೊಳ್ಳಲಾಗಿದೆ.

Gold  seized
ಅಕ್ರಮ ಚಿನ್ನ ಸಾಗಾಟ

By

Published : Nov 11, 2022, 12:16 PM IST

Updated : Nov 11, 2022, 5:14 PM IST

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2 ಕೋಟಿ ರೂಪಾಯಿ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದೆ. ನವೆಂಬರ್ 10 ರಂದು ಅನುಮಾನಾಸ್ಪದ ರೀತಿಯಲ್ಲಿ ಕಂಡುಬಂದ ನಾಲ್ವರು ಪುರುಷ ಪ್ರಯಾಣಿಕರನ್ನು ತಪಾಸಣೆ ನಡೆಸಲಾಗಿತ್ತು. ಈ ವೇಳೆ ಕಸ್ಟಮ್ಸ್ ಅಧಿಕಾರಿಗಳು ಅಕ್ರಮ ಬಯಲಿಗೆಳೆದಿದ್ದಾರೆ.

ಇದನ್ನೂ ಓದಿ:ಪಾದರಕ್ಷೆ, ಬನಿಯಾನ್‌, ಗುದನಾಳದಲ್ಲೂ ಚಿನ್ನ..: 10 ದಿನ, ₹1.46 ಕೋಟಿಯ ಮಾಲು ವಶ

ತಪಾಸಣೆ ನಡೆಸಿದಾಗ ಟ್ರಾಲಿ ಬ್ಯಾಗ್​ಗಳಲ್ಲಿ ಮರೆಮಾಚಿದ ಚಿನ್ನ ದೊರೆತಿದೆ. ಇದರಲ್ಲಿ 3 ಕೆಜಿ 895 ಗ್ರಾಂನ 24 ಕ್ಯಾರೆಟ್ ಶುದ್ಧತೆಯ ಚಿನ್ನವಿತ್ತು. ಚಿನ್ನ ಮತ್ತು ನಾಲ್ವರು ಪ್ರಯಾಣಿಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Last Updated : Nov 11, 2022, 5:14 PM IST

ABOUT THE AUTHOR

...view details