ಮಂಗಳೂರು: ದುಬೈನಿಂದ ಆಗಮಿಸಿದ ಪ್ರಯಾಣಿಕನಿಂದ ಅಂದಾಜು 29 ಲಕ್ಷ ಮೌಲ್ಯದ ಚಿನ್ನವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಜ.25 ರಂದು ದುಬೈನಿಂದ ಬಂದ ಏರ್ ಇಂಡಿಯಾ ವಿಮಾನದಲ್ಲಿ ಬಂದ ಪ್ರಯಾಣಿಕನನ್ನು ತಪಾಸಣೆ ನಡೆಸಿದಾಗ, ಚಿನ್ನವನ್ನು ಪೇಸ್ಟ್ ರೂಪಕ್ಕೆ ಪರಿವರ್ತಿಸಿ ತನ್ನ ದೇಹದಲ್ಲಿ ಬಚ್ಚಿಟ್ಟುಕೊಂಡು ಪ್ರಯಾಣಿಸಿರುವುದು ಪತ್ತೆಯಾಗಿದೆ.
584 ಗ್ರಾಂ ಚಿನ್ನ ಪತ್ತೆಯಾಗಿದ್ದು, ಇದರ ಮೌಲ್ಯ 29,14,160ರೂ. ಎಂದು ಅಂದಾಜಿಸಲಾಗಿದೆ. ಸದ್ಯ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಚಿನ್ನ ಮತ್ತು ಪ್ರಯಾಣಿಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಕೊರಿಯರ್ ಮೂಲಕ ಬಂದ ಡ್ಯಾಕ್ಯುಮೆಂಟ್ಸ್ ಬ್ಯಾಗ್ನಲ್ಲಿ 5.3 ಕೋಟಿ ಮೌಲ್ಯದ ಹೆರಾಯಿನ್ ಪತ್ತೆ: ವ್ಯಕ್ತಿಯ ಬಂಧನ