ಪುತ್ತೂರು: ಐಐಟಿ ಸಂಸ್ಥೆಗಳಿಗೆ ಪ್ರವೇಶ ಕಲ್ಪಿಸುವ ರಾಷ್ಟ್ರಮಟ್ಟದ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಗೌರೀಶ ಕಜಂಪಾಡಿ ಅಖಿಲ ಭಾರತ ಮಟ್ಟದಲ್ಲಿ 4273ನೇ ರ‍್ಯಾಂಕ್ ಗಳಿಸುವುದರ ಮೂಲಕ ಪುತ್ತೂರು ತಾಲೂಕಿನಲ್ಲಿ ಅಮೋಘ ಸಾಧನೆಗೈದ ವಿದ್ಯಾರ್ಥಿಯಾಗಿದ್ದಾನೆ.
ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಗೌರೀಶ ಕಜಂಪಾಡಿಗೆ 4273ನೇ ರ‍್ಯಾಂಕ್ - ಮಂಗಳೂರು ಸುದ್ದಿ
ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಗೌರೀಶ ಕಜಂಪಾಡಿ ಅಖಿಲ ಭಾರತ ಮಟ್ಟದಲ್ಲಿ 4273ನೇ ರ‍್ಯಾಂಕ್ ಗಳಿಸಿದ್ದಾನೆ.
ಗೌರೀಶ ಕಜಂಪಾಡಿ
ಹಾಗೆಯೇ ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ನಡೆಸುವ ಕಿಶೋರ್ ವೈಜ್ಞಾನಿಕ ಪ್ರೋತ್ಸಾಹಧನ ಯೋಜನೆಯ (ಕೆವಿಪಿವೈ) ಪರೀಕ್ಷೆಯಲ್ಲೂ ಅಖಿಲ ಭಾರತ ಮಟ್ಟದಲ್ಲಿ 454ನೇ ರ‍್ಯಾಂಕ್ ಗಳಿಸಿದ್ದ.
ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರೈಸಿರುವ ಗೌರೀಶ ಕಜಂಪಾಡಿ, ಪೆರ್ಲದ ಕಜಂಪಾಡಿಯ ಬಾಲರಾಜ ಕಜಂಪಾಡಿ ಮತ್ತು ರಾಜನಂದಿನಿ ದಂಪತಿಯ ಪುತ್ರ. ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.