ಕರ್ನಾಟಕ

karnataka

ETV Bharat / state

ಮಂಗಳೂರು ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ ಭವನ ವಿಸ್ತರಣಾ ಕಾಮಗಾರಿಗೆ ರಾಜ್ಯಪಾಲ ವಜೂಭಾಯಿ ವಾಲಾ ಶಿಲಾನ್ಯಾಸ - ರಾಜ್ಯಪಾಲ ವಜೂಭಾಯಿ ವಾಲಾ

ಮಂಗಳೂರು ಬಹುದೊಡ್ಡ ವ್ಯಾಪಾರ ಕೇಂದ್ರವಾಗಿರುವುದರಿಂದ ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸಬೇಕು ಎಂದು ರಾಜ್ಯಪಾಲ ವಜುಭಾಯಿ ವಾಲಾ ಸಲಹೆ ನೀಡಿದರು.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ ಭವನ ವಿಸ್ತರಣಾ ಕಾಮಗಾರಿಗೆ ಶಿಲಾನ್ಯಾಸ

By

Published : Feb 22, 2019, 8:24 PM IST

ಮಂಗಳೂರು: ವ್ಯಾಪಾರದ ಬಹುದೊಡ್ಡ ಕೇಂದ್ರವಾಗಿರುವ ಮಂಗಳೂರಿಗೆ ದೇಶ ವಿದೇಶಗಳಿಂದ ವ್ಯಾಪಾರಸ್ತರು ಆಗಮಿಸುತ್ತಾರೆ. ಹೀಗಾಗಿ ಮಂಗಳೂರು ವಿಮಾನ ನಿಲ್ದಾಣವನ್ನು ಉತ್ತಮ ರೀತಿಯಲ್ಲಿ ಅಭಿವೃದ್ಧಿಪಡಿಸಬೇಕು ಎಂದು ರಾಜ್ಯಪಾಲ ವಜುಭಾಯಿ ವಾಲಾ ಹೇಳಿದರು.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ ಭವನ ವಿಸ್ತರಣಾ ಕಾಮಗಾರಿಗೆ ಶಿಲಾನ್ಯಾಸ

ಬಜ್ಪೆಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಭವನ ವಿಸ್ತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,ಅನೇಕ ವರ್ಷಗಳಿಂದ ವ್ಯಾಪಾರದಲ್ಲಿ ಇತರೆ ನಗರಗಳಿಗಿಂತ ವೇಗವಾಗಿ ಪ್ರಗತಿ ಕಂಡ ಸಾಂಸ್ಕೃತಿಕ ನಗರ ಮಂಗಳೂರು. ಇದು ವ್ಯಾಪಾರದ ಬಹುದೊಡ್ಡ ಕೇಂದ್ರಗಳಿವೆ. ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅತ್ಯುತ್ತಮ ರೀತಿಯಲ್ಲಿ ಅಭಿವೃದ್ಧಿಪಡಿಸಬೇಕು ಎಂದು ಸಲಹೆ ನೀಡಿದರು.

ಈ ದೇಶದಲ್ಲಿ ಕೈಗಾರಿಕಾ ಅಭಿವೃದ್ಧಿ ಆಗಿದೆ, ವಿಜ್ಞಾನ ಮತ್ತು ತಂತ್ರಜ್ಞಾನಗಳ ಅಭಿವೃದ್ಧಿ ಆಗಿದೆ. ಈ ಎರಡರ ಅಭಿವೃದ್ಧಿ ಎಲ್ಲಿ ಆಗುತ್ತದೆಯೋ, ಆ ದೇಶ ಅಥವಾ ರಾಜ್ಯ ವಿಕಾಸ ಹೊಂದಿದಂತೆಯೇ. ಮತ್ತು ಅಲ್ಲಿ ಎಲ್ಲವೂ ಅಭಿವೃದ್ಧಿ ಹೊಂದಿದಂತೆ ಎಂದು ರಾಜ್ಯಪಾಲರು ಹೇಳಿದರು.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲು, ಮಂಗಳೂರು ಮೇಯರ್ ಭಾಸ್ಕರ.ಕೆ, ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಉಪಸ್ಥಿತರಿದ್ದರು.

ABOUT THE AUTHOR

...view details