ಕರ್ನಾಟಕ

karnataka

ETV Bharat / state

ದಡ್ಡಲಕಾಡು ಸರ್ಕಾರಿ ಆಂಗ್ಲಮಾಧ್ಯಮ ಪ್ರೌಢಶಾಲಾ ವಿಭಾಗ ಉದ್ಘಾಟನೆ - Bantwal

ನೂತನವಾಗಿ ಮಂಜೂರುಗೊಂಡಿರುವ ದಡ್ಡಲಕಾಡು ಸರ್ಕಾರಿ ಆಂಗ್ಲಮಾಧ್ಯಮ ಪ್ರೌಢಶಾಲಾ ವಿಭಾಗದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

Government English Medium High School Inauguration
ಸರ್ಕಾರಿ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್

By

Published : Oct 6, 2020, 11:58 PM IST

ಬಂಟ್ವಾಳ: ನೂತನವಾಗಿ ಮಂಜೂರುಗೊಂಡಿರುವ ದಡ್ಡಲಕಾಡು ಸರ್ಕಾರಿ ಆಂಗ್ಲಮಾಧ್ಯಮ ಪ್ರೌಢಶಾಲಾ ವಿಭಾಗವನ್ನು ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಮಂಗಳವಾರ ಬೆಳಗ್ಗೆ ನಡೆದ ಸರಳ ಕಾರ್ಯಕ್ರಮದಲ್ಲಿ ಉದ್ಘಾಟಿಸಿದರು.

ಬಂಟ್ವಾಳ ತಾಲೂಕಿನ ದಡ್ಡಲಕಾಡು ಎಂಬಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಮುಚ್ಚುವ ಹಂತದಲ್ಲಿತ್ತು. ಬಳಿಕ ಊರವರು ಉದ್ಯಮಿ ಪ್ರಕಾಶ್ ಅಂಚನ್ ನೇತೃತ್ವದಲ್ಲಿ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಮೂಲಕ ಶಾಲೆಯನ್ನು ದತ್ತು ತೆಗೆದುಕೊಂಡ ಬಳಿಕ ಮಕ್ಕಳ ಸಂಖ್ಯೆ ವೃದ್ಧಿಸಿತು. ಇದೀಗ ಹೈಸ್ಕೂಲ್ ನಿರ್ಮಾಣದವರೆಗೂ ಯಶೋಗಾಥೆ ಮುಂದುವರೆದಿದೆ. ಶಾಲಾ ದತ್ತು ಸಂಸ್ಥೆ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್ ಪ್ರಾಸ್ತಾವಿಕವಾಗಿ ಮಾತನಾಡಿ, ಶಾಲೆಯ ಸಭಾಂಗಣ ಹಾಗೂ ಅಕ್ಷರ ದಾಸೋಹ ಕಟ್ಟಡಕ್ಕೆ ಸರ್ಕಾರದಿಂದ ಅನುದಾನ ಒದಗಿಸುವಂತೆ ವಿನಂತಿಸಿದರು.

ದಡ್ಡಲಕಾಡು ಸರ್ಕಾರಿ ಆಂಗ್ಲಮಾಧ್ಯಮ ಪ್ರೌಢಶಾಲಾ ವಿಭಾಗದ ಉದ್ಘಾಟನೆ.

ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದಡ್ಡಲಕಾಡು ಶಾಲೆಗೆ ಎರಡು ಹಾಗೂ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ಒಂದು ಬಸ್​​ ಕೊಡುಗೆಯಾಗಿ ನೀಡಲಾಯಿತು. ಶಾಲೆಯ ನೂತನ ಸಭಾಂಗಣದ ಉಳಿದ ಕಾಮಗಾರಿ ಹಾಗೂ ಅಕ್ಷರ ದಾಸೋಹದ ಕಟ್ಟಡದ ಅನುದಾನಕ್ಕೆ ಶಾಸಕರಿಗೆ ಹಾಗೂ ಪ್ರೌಢಶಾಲಾ ವಿಭಾಗಕ್ಕೆ ಶಿಕ್ಷಕರನ್ನು ಒದಗಿಸುವಂತೆ ಡಿಡಿಪಿಐ ಅವರಿಗೆ ಬೇಡಿಕೆ ಮನವಿ ಸಲ್ಲಿಸಲಾಯಿತು.

ಡಿಡಿಪಿಐ ಮಲ್ಲೇಸ್ವಾಮಿ ಮಾತನಾಡಿ, ಶಾಲೆಗೆ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರನ್ನು ಒದಗಿಸುವ ಭರವಸೆಯನ್ನು ನೀಡಿದರು. ಈ ಸಂದರ್ಭದಲ್ಲಿ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಸದಸ್ಯೆ ಪದ್ಮಾವತಿ ಪೂಜಾರಿ, ಬುಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಡಿಡಿಪಿಐ ಮಲ್ಲೇಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಪ್ರೌಢಶಾಲಾ ಮುಖ್ಯಶಿಕ್ಷಕಿ ಅನಿತಾ ಉಪಸ್ಥಿತರಿದ್ದರು.

ABOUT THE AUTHOR

...view details