ಕರ್ನಾಟಕ

karnataka

ETV Bharat / state

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ರಾಜ್ಯಪಾಲರ ಕುಟುಂಬ ಭೇಟಿ: ಸರ್ಪ ಸಂಸ್ಕಾರ ಪೂಜೆ - Governor family to Subrahmanya

ಕರಾವಳಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ರಾಜ್ಯಪಾಲರು ಕುಟುಂಬಸಮೇತ ಭೇಟಿ ನೀಡಿದರು.

Governor Thawar Chand Gehlot family visits Subrahmanya
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ರಾಜ್ಯಪಾಲರ ಕುಟುಂಬ

By

Published : Jun 30, 2022, 8:16 PM IST

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ನೀಡಿ, ಸರ್ಪ ಸಂಸ್ಕಾರ ಪೂಜೆ ಸಲ್ಲಿಸಿದರು. ರಾಜ್ಯಪಾಲರನ್ನು ಆಶ್ಲೇಷ ವಸತಿಗೃಹದ ಎದುರು ದೇವಸ್ಥಾನದ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು.


ರಾಜ್ಯಪಾಲರು ನಾಳೆ ಆಶ್ಲೇಷ ಬಲಿ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ಅವರ ಕುಟುಂಬ ಇಂದು ಕ್ಷೇತ್ರದಲ್ಲೇ ತಂಗಲಿದೆ. ಸಚಿವ ಎಸ್.ಅಂಗಾರ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಆಯುಕ್ತ ಹೃಷಿಕೇಶ್ ಸೋನಾವಾಣೆ, ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ದ.ಕ ಜಿಲ್ಲಾ ಕಾರ್ಯನಿರ್ವಹಣಾಧಿಕಾರಿ ಕುಮಾರ್, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ. ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ:ದಕ್ಷಿಣಕನ್ನಡದಲ್ಲಿ ಮಳೆ ಆರ್ಭಟಕ್ಕೆ ಓರ್ವ ಬಲಿ.. ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ABOUT THE AUTHOR

...view details