ಬೆಳ್ತಂಗಡಿ: ಉಪಮುಖ್ಯಮಂತ್ರಿ ಮತ್ತು ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ ಎಂ. ಕಾರಜೋಳ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ.
ಧರ್ಮಸ್ಥಳಕ್ಕೆ ಗೋವಿಂದ ಕಾರಜೋಳ ಭೇಟಿ: ಮಂಜುನಾಥನ ದರ್ಶನ ಪಡೆದ ಡಿಸಿಎಂ - Govinda Karajola
ಡಿಸಿಎಂ ಗೋವಿಂದ ಎಂ. ಕಾರಜೋಳ ಧರ್ಮಸ್ಥಳದ ಮಂಜುನಾಥನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಮಂಜುನಾಥನ ದರ್ಶನ ಪಡೆದ ಡಿಸಿಎಂ
ಬಳಿಕ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಕ್ಷೇತ್ರದ ಪರವಾಗಿ ಸಚಿವರನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು. ಕೇತ್ರದ ವತಿಯಿಂದ ಡಾ. ಹೆಗ್ಗಡೆಯವರು ಸಚಿವರನ್ನು ಗೌರವಿಸಿದರು.
ಈ ಸಂದರ್ಭ ಶಾಸಕ ಹರೀಶ್ ಪೂಂಜ, ಹರ್ಷೇಂದ್ರ ಕುಮಾರ್ ಧರ್ಮಸ್ಥಳ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.