ಬೆಳ್ತಂಗಡಿ :ತಾಲೂಕಿನ 46 ಗ್ರಾಪಂಗಳ 624 ಸ್ಥಾನಗಳಿಗೆ ನಿನ್ನೆ ಚುನಾವಣೆ ನಡೆದಿದೆ. ಹೆಚ್ಚಿನ ಸಂಖ್ಯೆಯಲ್ಲೆ ಮತದಾರರು ಮತಗಟ್ಟೆಗಳಿಗೆ ಆಗಮಿಸಿ ಮತದಾನ ಮಾಡಿದ್ದು, ಎಲ್ಲೆಡೆ ಶಾಂತಿಯುತ ಮತದಾನವಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಕುಟುಂಬ ಸಮೇತವಾಗಿ ಆಗಮಿಸಿ ಮತ ಚಲಾಯಿಸಿದ್ದಾರೆ. ಇನ್ನು, ಶಾಸಕ ಹರೀಶ್ ಪೂಂಜ ಅವರು ತಮ್ಮ ಹುಟ್ಟೂರಾದ ಗರ್ಡಾಡಿಯ ಪ್ರಾಥಮಿಕ ಶಾಲೆಯಲ್ಲಿ ತಂದೆ ಮುತ್ತಣ್ಣ ಶೆಟ್ಟಿ, ಪತ್ನಿ ಡಾ.ಸ್ವೀಕೃತ ಜೊತೆ ಮತಗಟ್ಟೆಗೆ ತೆರಳಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.