ಕರ್ನಾಟಕ

karnataka

ETV Bharat / state

ದ.ಕ ಜಿಲ್ಲೆಯಿಂದ ಹೊರ ರಾಜ್ಯಗಳಿಗೆ ಹೋಗುವವರಿಗಾಗಿ ಡಿಸಿಯಿಂದ ಮಾರ್ಗಸೂಚಿ - ದ.ಕ.ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್

ದಕ್ಷಿಣ ಕನ್ನಡ ಜಿಲ್ಲೆಯಿಂದ ಹೊರ ರಾಜ್ಯಗಳಿಗೆ ಹೋಗುವ ಪ್ರಯಾಣಿಕರು https://sevasindhu.Karnataka.gov.in/ ವೆಬ್​ಸೈಟ್​​ನಲ್ಲಿ ಲಾಗಿನ್ ಆಗಿ ತಮ್ಮ ಹೆಸರು ಹಾಗೂ ಇತರ ವಿವರಗಳನ್ನು ನಮೂದಿಸಿ ನೋಂದಣಿ ಮಾಡಬಹುದು ಎಂದು ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್​ ತಿಳಿಸಿದ್ದಾರೆ.

Guidelines from District Collector for Overseas Travelers
ಸಿಂಧು

By

Published : May 2, 2020, 9:23 PM IST

ಮಂಗಳೂರು: ದ.ಕ ಜಿಲ್ಲೆಯಿಂದ ಇತರ ರಾಜ್ಯಗಳಿಗೆ ಪ್ರಯಾಣ ಬೆಳೆಸುವವರಿಗೆ ಮಾರ್ಗಸೂಚಿ ಬಿಡುಗಡೆಯಾಗಿದೆ. ಯಾರಾದರೂ ಪ್ರಯಾಣ ಬೆಳೆಸುವವರಿದ್ದಲ್ಲಿ https://sevasindhu.Karnataka.gov.in/ ವೆಬ್​ಸೈಟ್​​ನಲ್ಲಿ ಲಾಗಿನ್ ಆಗಿ ತಮ್ಮ ಹೆಸರು ಹಾಗೂ ಇತರ ವಿವರಗಳನ್ನು ನಮೂದಿಸಿ ನೋಂದಣಿ ಮಾಡಬಹುದು ಎಂದು ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್​ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದಿದ್ದಲ್ಲಿ ಎಲ್ಲಾ ಗ್ರಾಪಂ, ಪಪಂ, ನಗರಸಭೆ, ಪುರಸಭೆ, ತಾಲೂಕು ಕಚೇರಿ, ನಗರ ಪಾಲಿಕೆಯ ಎಲ್ಲಾ ವಲಯ ಕಚೇರಿ, ಮಂಗಳೂರು ಒನ್, ಮಂಗಳೂರು ನಗರ ವ್ಯಾಪ್ತಿಯ ಎಲ್ಲಾ ನಾಡ ಕಚೇರಿಗೆ ಸಂಪರ್ಕಿಸಬಹುದು‌. ಸ್ವೀಕೃತವಾದ ಅರ್ಜಿಗಳನ್ನು ರಾಜ್ಯಮಟ್ಟದಲ್ಲಿ ಪರಿಶೀಲನೆ ನಡೆಸಿ, ರಾಜ್ಯದ ಅನುಮತಿ ಇದ್ದಲ್ಲಿ ಮಾತ್ರ ಅನುಮೋದಿಸಲ್ಪಡುತ್ತದೆ‌. ಅನುಮೋದಿಸಲ್ಪಟ್ಟ ಅರ್ಜಿದಾರರಿಗೆ ರಾಜ್ಯ ಸರ್ಕಾರದ ನೋಡಲ್ ಅಧಿಕಾರಿಯವರ ನಿರ್ದೇಶನದ ಮೇರೆಗೆ ಪ್ರಯಾಣದ ವ್ಯವಸ್ಥೆ ಮಾಡಲಾಗುವುದು.

ಜಿಲ್ಲಾಧಿಕಾರಿಯಿಂದ ಮಾರ್ಗಸೂಚಿ

ಪ್ರಯಾಣದ ಮೊದಲಿಗೆ ಸ್ಕ್ರೀನಿಂಗ್ ನಡೆಸಲಾಗುವುದು. ಅನುಮೋದಿತ ಪ್ರಯಾಣಿಕರು ಪ್ರಯಾಣಿಸುವ ಸಂದರ್ಭ ಡ್ರೈವಿಂಗ್ ಲೈಸನ್ಸ್, ಪಾಸ್​ಪೋರ್ಟ್, ಮತದಾನದ ಚೀಟಿ, ಆಧಾರ್ ಕಾರ್ಡ್, ಪಾನ್ ಕಾರ್ಡ್ ಮುಂತಾದವುಗಳಲ್ಲಿ ಯಾವುದಾದರೂ ಒಂದನ್ನು ಹೊಂದಿರಬೇಕು ಎಂದು ಡಿಸಿಯವರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಏನಾದರೂ ಸಂದೇಹವಿದ್ದಲ್ಲಿ ಕಂಟ್ರೋಲ್‌ ರೂಂ ಟೋಲ್ ಫ್ರೀ ನಂಬರ್ 1077 ಹಾಗೂ ವಾಟ್ಸ್ಆ್ಯಪ್ ಸಂಖ್ಯೆ 9483908000ಕ್ಕೆ ಸಂಪರ್ಕಿಸಬಹುದು‌ ಎಂದು ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details