ಕರ್ನಾಟಕ

karnataka

ETV Bharat / state

ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ವಿಫಲ: ಹಳೆಯಂಗಡಿ ಗ್ರಾ.ಪಂ ವಿಸರ್ಜನೆ

ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ವಿಫಲವಾದ ಹಿನ್ನೆಲೆಯಲ್ಲಿ ಹಳೆಯಂಗಡಿ ಗ್ರಾಮ ಪಂಚಾಯತ​ನ್ನು ವಿಸರ್ಜಿಸುವಂತೆ ಗ್ರಾಮೀಣಾಭಿವೃದ್ದಿ ಹಾಗು ಪಂಚಾಯತ್​ ರಾಜ್​ ಇಲಾಖೆ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

By

Published : Nov 6, 2019, 4:09 PM IST

Breaking News

ಮಂಗಳೂರು:ಸಾರ್ವಜನಿಕಕರ್ತವ್ಯಗಳನ್ನು ನಿಭಾಯಿಸಲು ಅಸಮರ್ಥವಾದ ಹಳೆಯಂಗಡಿ ಗ್ರಾಮ ಪಂಚಾಯತ್ ವಿಸರ್ಜನೆ ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಹಳೆಯಂಗಡಿ ಗ್ರಾಮ ಪಂಚಾಯತ್‌ ವಿಸರ್ಜನೆಯ ಆದೇಶದ ಪ್ರತಿ

ಗ್ರಾ.ಪಂನ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದ್ದು, ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಸಮರ್ಥವಾಗಿದೆ ಎಂದು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 268(2) ರಂತೆ ಸದರಿ ಇರುವ ಗ್ರಾಮ ಪಂಚಾಯತ್‌ ವಿಸರ್ಜಿಸಲು ಆದೇಶಿಸಲಾಗಿದೆ.

ಈ ಹಿಂದೆ ಹಳೆಯಂಗಡಿ ಗ್ರಾಮ ಪಂಚಾಯತ್ ವಿರುದ್ಧ ಸಾರ್ವಜನಿಕರೇ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಬೀದಿದೀಪ ನಿರ್ವಹಣೆ, ತ್ಯಾಜ್ಯ ವಿಲೇವಾರಿ, ನೀರು ಸರಬರಾಜು ಕುರಿತಂತೆ ಸಾರ್ವಜನಿಕರಿಗೆ ಇನ್ನಿತರ ಸೌಲಭ್ಯಗಳನ್ನು ಸಾರ್ವಜನಿಕರಿಗೆ ಒದಗಿಸುವಲ್ಲಿ ಗ್ರಾಮ ಪಂಚಾಯತ್ ವಿಫಲವಾಗಿದೆ ಎಂದು ಆರೋಪಿಸಲಾಗಿತ್ತು.

ABOUT THE AUTHOR

...view details