ಕರ್ನಾಟಕ

karnataka

ETV Bharat / state

ಪದ್ಮಶ್ರೀ ಹರೇಕಳ ಹಾಜಬ್ಬ ಸೇರಿ ಮೂವರಿಗೆ ಬ್ಯಾರಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ - ಬ್ಯಾರಿ ಭಾಷೆ,

ಬ್ಯಾರಿ ಭಾಷೆ ಮತ್ತು ಶಿಕ್ಷಣ ಕ್ಷೇತ್ರ, ಬ್ಯಾರಿ ಕಲೆ ಮತ್ತು ಸಾಹಿತ್ಯ ಕ್ಷೇತ್ರ, ಬ್ಯಾರಿ ಸಂಸ್ಕೃತಿ ಮತ್ತು ಸಮಾಜ ಸೇವೆ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ಮೂರು ಮಂದಿ ಗಣ್ಯರನ್ನು ಅಕಾಡೆಮಿಯು 2021ರ ಸಾಲಿನ ಗೌರವ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ. ಇನ್ನು ಬ್ಯಾರಿ ಭಾಷೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಹರೇಕಳ ಹಾಜಬ್ಬ ಮಾಡಿದ ಸಾಧನೆಗಾಗಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

harekala-hajabba
ಹರೇಕಳ ಹಾಜಬ್ಬಗೆ ಗೌರವ ಪ್ರಶಸ್ತಿ ಘೋಷಣೆ

By

Published : Jun 29, 2021, 5:09 PM IST

ಮಂಗಳೂರು:ಅಕ್ಷರ ಸಂತ, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಸೇರಿದಂತೆ ಮೂವರಿಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2021ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ಆರು ಮಂದಿಗೆ ಗೌರವ ಪುರಸ್ಕಾರವನ್ನು ಘೋಷಿಸಲಾಗಿದೆ.

ಬ್ಯಾರಿ ಭಾಷೆ ಮತ್ತು ಶಿಕ್ಷಣ ಕ್ಷೇತ್ರ, ಬ್ಯಾರಿ ಕಲೆ ಮತ್ತು ಸಾಹಿತ್ಯ ಕ್ಷೇತ್ರ, ಬ್ಯಾರಿ ಸಂಸ್ಕೃತಿ ಮತ್ತು ಸಮಾಜ ಸೇವೆ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ಮೂರು ಮಂದಿ ಗಣ್ಯರನ್ನು ಅಕಾಡೆಮಿಯು 2021ರ ಸಾಲಿನ ಗೌರವ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ. ಬ್ಯಾರಿ ಭಾಷೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಹರೇಕಳ ಹಾಜಬ್ಬ, ಬ್ಯಾರಿ ಕಲೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಹುಸೈನ್ ಕಾಟಿಪಳ್ಳ ಮತ್ತು ಬ್ಯಾರಿ ಸಂಸ್ಕೃತಿ ಮತ್ತು ಸಮಾಜಸೇವೆಯಲ್ಲಿ ಡಾ.ಇ.ಕೆ.ಎ. ಸಿದ್ದೀಕ್ ಆಡ್ಡೂರು ಅವರನ್ನು ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಗೌರವ ಪ್ರಶಸ್ತಿಯು ರೂ.50000/- ನಗದು, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರಗಳನ್ನು ಒಳಗೊಂಡಿರುತ್ತದೆ.

ಹರೇಕಳ ಹಾಜಬ್ಬಗೆ ಮತ್ತೊಂದು ಗೌರವ ಪ್ರಶಸ್ತಿ ಘೋಷಣೆ

ಇದನ್ನು ಓದಿ: ದಲಿತ ಸಿಎಂ ಬಗ್ಗೆ ದನಿ ಎತ್ತಿದ ಹೆಚ್​ಡಿಕೆ.. ಕಾಂಗ್ರೆಸ್​ ವಿರುದ್ಧ ಮುಂದುವರಿದ ವಾಕ್ ​ಪ್ರಹಾರ!

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2021ನೇ ಸಾಲಿನ ಗೌರವ ಪುರಸ್ಕಾರಕ್ಕೆ ಆರು ಮಂದಿ ಆಯ್ಕೆಯಾಗಿರುತ್ತಾರೆ. ಬ್ಯಾರಿ ಸಂಗೀತ ಕ್ಷೇತ್ರದಲ್ಲಿ ಅಶ್ರಫ್ ಅಪೋಲೋ, ಬ್ಯಾರಿ ಸಂಘಟನೆ ಕ್ಷೇತ್ರದಲ್ಲಿ ಡಾ.ಕೆ.ಎ. ಮುನೀರ್ ಬಾವ, ಬ್ಯಾರಿ ಮಹಿಳಾ ಸಾಧಕಿಯಾಗಿ ಮರಿಯಮ್ ಫೌಝಿಯ ಬಿ.ಎಸ್,​ ಬ್ಯಾರಿ ಯುವ ಪ್ರತಿಭೆ ವಿಭಾಗದಲ್ಲಿ ಬ್ಯಾರಿ ಝುಲ್ಫಿ, ಬ್ಯಾರಿ ದಫ್ ಕ್ಷೇತ್ರದಲ್ಲಿ ಮೊಹಮ್ಮದ್ ಬಶೀರ್ ಉಸ್ತಾದ್, ಬ್ಯಾರಿ ಬಾಲ ಪ್ರತಿಭೆಯಾಗಿ ಮೊಹಮ್ಮದ್ ಫರಾಝ್ ಆಲಿ ಆಯ್ಕೆಯಾಗಿದ್ದಾರೆ. ಗೌರವ ಪುರಸ್ಕಾರವು ರೂ.10,000/- ನಗದು, ಸ್ಮರಣಿಕೆ ಮತ್ತು ಪುರಸ್ಕಾರ ಪತ್ರಗಳನ್ನು ಒಳಗೊಂಡಿರುತ್ತದೆ.

ಕೊರೊನಾದ ತೀವ್ರತೆ ಸಂಪೂರ್ಣವಾಗಿ ಕಡಿಮೆಯಾದ ಬಳಿಕ, ಎಲ್ಲವೂ ಸಹಜ ಸ್ಥಿತಿಗೆ ಮರಳಿದ ನಂತರ ಮುಖ್ಯಮಂತ್ರಿಗಳ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ದಿನಾಂಕವನ್ನು ನಿಗದಿಪಡಿಸಿಕೊಂಡು, ಇವರೆಲ್ಲರ ಉಪಸ್ಥಿತಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಈ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಅವರು ತಿಳಿಸಿದ್ದಾರೆ.

ABOUT THE AUTHOR

...view details