ಮಂಗಳೂರು :ಹರೇಕಳ ಗ್ರಾಮದಲ್ಲಿ ಐದು ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಪಂಚಾಯತ್ ಕಠಿಣ ಕ್ರಮಕೈಗೊಂಡಿದೆ. ಸೋಮವಾರದಿಂದ 10 ದಿನ ಗ್ರಾಮವನ್ನು ಸಂಪೂರ್ಣ ಲಾಕ್ಡೌನ್ ಮಾಡಲು ಸ್ಥಳೀಯರೆಲ್ಲ ತೀರ್ಮಾನಿಸಿದ್ದಾರೆ.
ಕೊರೊನಾ ಭೀತಿ:ಉಳ್ಳಾಲದ ಹರೇಕಳ ಗ್ರಾಮ 10 ದಿನ ಲಾಕ್ಡೌನ್ಗೆ ತೀರ್ಮಾನ
ಉತ್ತರ ಕನ್ನಡ ಜಿಲ್ಲೆಯ ಉಳ್ಳಾಲ ಬಳಿಯ ಹರೇಕಳ ಗ್ರಾಮದಲ್ಲಿ ಐದು ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಗ್ರಾಮವನ್ನು ಹತ್ತು ದಿನ ಲಾಕ್ಡೌನ್ ಮಾಡಲು ಗ್ರಾಮಸ್ಥರು ತೀರ್ಮಾನಿಸಿದ್ದಾರೆ..
ಈ ಬಗ್ಗೆ ಶುಕ್ರವಾರ ಪಂಚಾಯತ್‌ನಲ್ಲಿ ನಡೆದ ಸಭೆಯಲ್ಲಿ ಮುಖಂಡ ಕೆ ರವೀಂದ್ರ ಶೆಟ್ಟಿ ಉಳಿದೊಟ್ಟು ಮಾತನಾಡಿ, ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಜಲಮಾರ್ಗದ ಜೊತೆ ಬಸ್ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. ಹೊರಗಿನ ಖಾಸಗಿ ವಾಹನ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಅಗತ್ಯ ಕಾರ್ಯಗಳಿಗೆ ಹೊರಗೆ ಹೋಗುವವರು ಕಾರಣ ನೀಡಬೇಕು ಎಂದರು.
ಪಂಚಾಯತ್ ಅಧ್ಯಕ್ಷೆ ಅನಿತಾ ಡಿಸೋಜ ಮಾತನಾಡಿ, ಗ್ರಾಮದಲ್ಲಿರುವ ಎಲ್ಲ ಅಂಗಡಿಗಳನ್ನು 12 ಗಂಟೆಗೆ ಬಂದ್ ಮಾಡಲಾಗುತ್ತಿದೆ. ಹೋಟೆಲ್ಗಳೆಲ್ಲ ಸಂಪೂರ್ಣ ಬಂದ್ ಇವೆ. ಮಕ್ಕಳು ಮನೆಯಿಂದ ಹೊರಬರಬಾರದು. ಶನಿವಾರದಿಂದ ಎಲ್ಲಾ ಮನೆಗಳಿಗೆ ಸ್ಯಾನಿಟೈಸರ್ ಸಿಂಪಡಿಕೆ ಮಾಡಲಾಗುವುದು. ಈ ನಿರ್ಣಯ ಧಾರ್ಮಿಕ, ರಾಜಕೀಯ, ಸರ್ವಪಕ್ಷ ಮುಖಂಡರ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದರು.