ಬಂಟ್ವಾಳ (ದಕ್ಷಿಣ ಕನ್ನಡ):ಕಿಯೋನಿಕ್ಸ್ ಅಧ್ಯಕ್ಷರಾಗಿ ನೇಮಕಗೊಂಡ ಬಿಜೆಪಿ ಮುಖಂಡ ಕೆ.ಹರಿಕೃಷ್ಣ ಬಂಟ್ವಾಳ್, ಕೇಂದ್ರ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕರೂ ಆಗಿರುವ ಕೆಪಿಸಿಸಿ ಮಾಜಿ ಅಧ್ಯಕ್ಷ ಬಿ.ಜನಾರ್ದನ ಪೂಜಾರಿಯವರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದರು.
ರಾಜಕೀಯ ಗುರು ಜನಾರ್ದನ ಪೂಜಾರಿ ಆಶೀರ್ವಾದ ಪಡೆದ ಹರಿಕೃಷ್ಣ ಬಂಟ್ವಾಳ್ - ಕಿಯೋನಿಕ್ಸ್ ಅಧ್ಯಕ್ಷರಾಗಿ ನೇಮಕಗೊಂಡ ಕಿಯೋನಿಕ್ಸ್ ಅಧ್ಯಕ್ಷರಾಗಿ ನೇಮಕಗೊಂಡ
ಕಿಯೋನಿಕ್ಸ್ ಅಧ್ಯಕ್ಷರಾಗಿ ನೇಮಕಗೊಂಡ ಬಿಜೆಪಿ ಮುಖಂಡ ಕೆ.ಹರಿಕೃಷ್ಣ ಬಂಟ್ವಾಳ್, ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕರೂ ಆಗಿರುವ ಕೆಪಿಸಿಸಿ ಮಾಜಿ ಅಧ್ಯಕ್ಷ ಬಿ.ಜನಾರ್ದನ ಪೂಜಾರಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಜನಾರ್ದನ ಪೂಜಾರಿ ಆಶೀರ್ವಾದ ಪಡೆದ ಹರಿಕೃಷ್ಣ ಬಂಟ್ವಾಳ್
ಸುದೀರ್ಘ ಕಾಲ ಪೂಜಾರಿಯವರ ಒಡನಾಡಿಯಾಗಿದ್ದ ಹರಿಕೃಷ್ಣ ಬಂಟ್ವಾಳ್, ಕಿಯೋನಿಕ್ಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಬಂಟ್ವಾಳದ ನಿವಾಸಕ್ಕೆ ಇಂದು ಆಗಮಿಸಿದರು.
ಪಾರದರ್ಶಕವಾದ ಆಡಳಿತ ನಡೆಸಿ, ಜನರ ಪ್ರೀತಿ ವಿಶ್ವಾಸಗಳಿಗೆ ಪಾತ್ರರಾಗುವಂತೆ ಬಂಟ್ವಾಳ್ ಅವರಿಗೆ ಪೂಜಾರಿ ಸಲಹೆ ನೀಡಿದರು.