ಬೆಳ್ತಂಗಡಿ: ಲಾಕ್ಡೌನ್ನಿಂದ ಕಳೆದ ಹಲವು ದಿನಗಳಿಂದ ಯಾವುದೇ ರೀತಿಯ ವ್ಯವಹಾರ ಇಲ್ಲದೆ ಸಂಕಷ್ಟದಲ್ಲಿರುವ ಬೆಳ್ತಂಗಡಿ ತಾಲೂಕಿನ ಸುಮಾರು 300 ರಿಕ್ಷಾ ಚಾಲಕರಿಗೆ ಆಹಾರ ಸಾಮಾಗ್ರಿಗಳ ಕಿಟ್ಗಳನ್ನು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ವಿತರಿಸಿದರು.
300 ರಿಕ್ಷಾ ಚಾಲಕರಿಗೆ ದಿನಸಿ ಕಿಟ್ ವಿತರಿಸಿದ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ - Harish Kumar, distributed food kits
ಬೆಳ್ತಂಗಡಿ ತಾಲೂಕಿನ ಸುಮಾರು 300 ರಿಕ್ಷಾ ಚಾಲಕರಿಗೆ ಆಹಾರ ಸಾಮಾಗ್ರಿಗಳ ಕಿಟ್ಗಳನ್ನು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ವಿತರಿಸಿದರು.
ಈಗಾಗಲೇ ತಾಲೂಕಿನ ಹಲವು ಕಡೆ ಸಂಕಷ್ಟದಲ್ಲಿರುವ ಹಲವು ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳನ್ನು ವಿತರಿಸಿರುವ ಅವರು, ಇಂದು ನಗರದ ಚರ್ಚ್ ರಸ್ತೆ, ಸಂತೆ ಕಟ್ಟೆ, ಬಸ್ ಸ್ಟಾಂಡ್, ರಿಕ್ಷಾ ಪಾರ್ಕಿಂಗ್ನ ರಿಕ್ಷಾ ಚಾಲಕರಿಗೆ ದಿನಸಿ ಕಿಟ್ಗಳನ್ನು ವಿತರಿಸಿ ಮಾನವೀಯತೆ ಮೆರೆದಿದ್ದಾರೆ. ಅಲ್ಲದೇ ಮುಂದಿನ ದಿನಗಳಲ್ಲೂ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸ್ಪಂದಿಸುವುದಾಗಿ ತಿಳಿಸಿದ್ದಾರೆ.
ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶೈಲೇಶ್ ಕುಮಾರ್ ಕುರ್ತೋಡಿ, ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್, ಕಾಂಗ್ರೆಸ್ ಎಸ್.ಸಿ.ಘಟಕಾಧ್ಯಕ್ಷ ಬಿ.ಕೆ.ವಸಂತ್ ಮತ್ತಿತರರು ಉಪಸ್ಥಿತರಿದ್ದರು.