ಮಂಗಳೂರು: ಉತ್ತರ ಪ್ರದೇಶದ ಹಥ್ರಾಸ್ ಯುವತಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಆರೋಪ ಪ್ರಕರಣ ಖಂಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಧರಣಿ ಹಾಗೂ ರಸ್ತೆ ತಡೆ ನಡೆಸಲಾಯಿತು.
ನಗರದ ಹಂಪನಕಟ್ಟೆಯಲ್ಲಿರುವ ಕ್ಲಾಕ್ ಟವರ್ ಮುಂಭಾಗ ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕ ಜೆ.ಆರ್. ಲೋಬೊ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೆಳಗ್ಗೆ ಪ್ರತಿಭಟನೆ ನಡೆಸಿದರು.
ಹಥ್ರಾಸ್ ಪ್ರಕರಣ ಖಂಡಿಸಿ ಮಂಗಳೂರಲ್ಲಿ ಕಾಂಗ್ರೆಸ್ ಪ್ರತಿಭಟನೆ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ರಾಹುಲ್ ಗಾಂಧಿಗೆ ಸಂತ್ರಸ್ತ ಯುವತಿಯ ಕುಟುಂಬಸ್ಥರನ್ನು ಭೇಟಿಯಾಗಲು ಬಿಡದಿರುವುದನ್ನು ಖಂಡಿಸಿದರು. ಬಳಿಕ ಪ್ರತಿಭಟನಾಕಾರರು ವಾಹನ ಸಂಚಾರ ನಡೆಸದಂತೆ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.
ಪೊಲೀಸರು ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕ ಜೆ.ಆರ್. ಲೋಬೊ ಸೇರಿದಂತೆ ಸುಮಾರು 40-50 ರಷ್ಟು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಎರಡು ಪೊಲೀಸ್ ವ್ಯಾನ್ಗಳಲ್ಲಿ ಕರೆದೊಯ್ದರು.