ಮಂಗಳೂರು:ಚಿಕಿತ್ಸೆಗಾಗಿ ಉಡುಪಿಗೆ ಬಂದಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಬೆಳಗ್ಗೆ ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಬಂದಿಳಿದರು. ಈ ಸಂದರ್ಭ ಅವರು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.
ಮಾಧ್ಯಮಗಳೆದುರು ತುಟಿ ಬಿಚ್ಚದ ದೇವೇಗೌಡರು! - ಬಜ್ಪೆ ಅಂತಾರಾಷ್ಟ್ರೀಯ ವಿಮಾನನಿಲ್ದಾಣ
ಬೆಂಗಳೂರಿನ ವಿಮಾನ ನಿಲ್ದಾಣದಿಂದ ಬಂದ ಗೌಡರು, ಇಂದು ಬೆಳಗ್ಗೆ 8.30 ಸುಮಾರಿಗೆ ಬಜ್ಪೆ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಬಂದಿಳಿದರು. ಇಲ್ಲಿಂದ ಉಡುಪಿ ರಸ್ತೆಯ ಮೂಲಕ ಖಾಸಗಿ ರೆಸಾರ್ಟ್ಗೆ ಪ್ರಯಾಣ ಬೆಳೆಸಿದರು.

ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಎಚ್.ಡಿ.ದೇವೇಗೌಡ
ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ನಿರಾಕರಣೆ
ಪತ್ನಿ ಚೆನ್ನಮ್ಮ ಅವರೊಂದಿಗೆ ಆಗಮಿಸಿದ ಎಚ್.ಡಿ. ದೇವೇಗೌಡ ಪಂಚಕರ್ಮ ಚಿಕಿತ್ಸೆಗಾಗಿ ಉಡುಪಿಯ ಮೂಳೂರಿನಲ್ಲಿರುವ ಖಾಸಗಿ ರೆಸಾರ್ಟ್ಗೆ ಬಂದಿದ್ದಾರೆ. ಬೆಂಗಳೂರಿನ ವಿಮಾನ ನಿಲ್ದಾಣದಿಂದ ಬಂದ ಅವರು ಇಂದು ಬೆಳಗ್ಗೆ 8.30 ಸುಮಾರಿಗೆ ಬಜ್ಪೆ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಬಂದಿಳಿದರು. ಇಲ್ಲಿಂದ ಉಡುಪಿ ರಸ್ತೆಯ ಮೂಲಕ ಖಾಸಗಿ ರೆಸಾರ್ಟ್ಗೆ ಪ್ರಯಾಣ ಬೆಳೆಸಿದರು.
ಇಂದು ಅಥವಾ ನಾಳೆ ಅವರು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದು, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಚಂಡಿಕಾ ಯಾಗ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.