ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರ ಗುಂಡಿಗೆ ಬಲಿಯಾದ ಇಬ್ಬರ ಮನೆಗೆ ಮಾಜಿ ಮುಖ್ಯ ಮಂತ್ರಿ ಕುಮಾರಸ್ವಾಮಿ ಭೇಟಿ ನೀಡಿ ಸಾಂತ್ವನ ಹೇಳಿದರು.
ಮಂಗಳೂರು ಗೋಲಿಬಾರ್: ಮೃತರ ಮನೆಗೆ ಹೆಚ್ಡಿಕೆ ಭೇಟಿ, ಪರಿಹಾರ ಘೋಷಣೆ - HDK Visit houses of Youths who died in Mangaluru police Golibar
ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸ್ ಗುಂಡಿಗೆ ಬಲಿಯಾದ ಇಬ್ಬರ ಮನೆಗೆ ಮಾಜಿ ಮುಖ್ಯ ಮಂತ್ರಿ ಕುಮಾರಸ್ವಾಮಿ ಭೇಟಿ ನೀಡಿ ಸಾಂತ್ವನ ಹೇಳಿದರು. ಹಾಗೂ ಜೆಡಿಎಸ್ ಪಕ್ಷದ ವತಿಯಿಂದ ಪರಿಹಾರ ಘೋಷಣೆ ಮಾಡಿದರು.
ಮೃತರ ಮನೆಗೆ ಹೆಚ್ಡಿಕೆ ಭೇಟಿ
ಇದೇ ವೇಳೆ ಮೃತರ ಕುಟುಂಬಗಳಿಗೆ ಜೆಡಿಎಸ್ ಪಕ್ಷದ ವತಿಯಿಂದ ತಲಾ 5ಲಕ್ಷ ರೂಪಾಯಿ ಪರಿಹಾರವನ್ನು ಕುಮಾರಸ್ವಾಮಿ ಘೋಷಿಸಿದರು.
ಬಳಿಕ ನಗರದ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ, ಪೊಲೀಸ್ ಗೋಲಿಬಾರ್ ವೇಳೆ ಗಾಯಗೊಂಡವರ ಆರೋಗ್ಯ ವಿಚಾರಿಸಿ, ಘಟನೆಯ ಬಗ್ಗೆ ಮಾಹಿತಿ ಪಡೆದರು.