ಮಂಗಳೂರು:ನಗರದ ಕಾವೂರು ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಹನುಮಂತ ಲಮಾಣಿ(38) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಾಗಲಕೋಟೆಯ ಲವಲೇಶ್ವರ ಗ್ರಾಮದವರಾದ ಇವರು ಮಂಗಳೂರಿನ ಕಾವೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಮಂಗಳೂರು: ಹೃದಯಾಘಾತದಿಂದ ಹೆಡ್ ಕಾನ್ಸ್ಟೇಬಲ್ ಸಾವು - etv bharat kannada
ಮಂಗಳೂರಿನ ಕಾವೂರು ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಹನುಮಂತ ಲಮಾಣಿ ಹೃದಯಾಘಾತದಿಂದ ಮೃತರಾಗಿದ್ದಾರೆ.
ಮಂಗಳೂರು: ಹೃದಯಾಘಾತದಿಂದ ಹೆಡ್ ಕಾನ್ಸ್ಟೇಬಲ್ ಸಾವು
ವಿಶೇಷ ಕರ್ತವ್ಯದಡಿ ಅವರು ಊರಿಗೆ ತೆರಳಿದ್ದು, ಅಲ್ಲಿ ಗುರುವಾರ ಮುಂಜಾನೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 2008ರ ಬ್ಯಾಚ್ನಲ್ಲಿ ಸೇವೆಗೆ ಸೇರ್ಪಡೆಗೊಂಡಿದ್ದ ಹನುಮಂತ ಲಮಾಣಿ, ಈ ಹಿಂದೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಮುಲ್ಕಿ, ಉತ್ತರ ಸಂಚಾರ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ಇದನ್ನೂ ಓದಿ:ಕಾಡಾನೆ ಕಂಡರೆ ಪೋಟೋ, ವಿಡಿಯೋ ಮಾಡಬೇಡಿ: ಅರಣ್ಯಾಧಿಕಾರಿಗಳಿಂದ ಎಚ್ಚರಿಕೆ ಸಂದೇಶ