ಉಳ್ಳಾಲ(ದಕ್ಷಿಣ ಕನ್ನಡ) : ಉಳ್ಳಾಲ ತಾಲೂಕಿನ ಕೊಣಾಜೆ ಠಾಣೆಯಲ್ಲಿ ಎಸ್.ಬಿ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ಟೇಬಲ್ ಜಗನ್ನಾಥ (44) ಇಂದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಉಳ್ಳಾಲ: ಕರ್ತವ್ಯನಿರತ ಹೆಡ್ ಕಾನ್ಸ್ ಸ್ಟೇಬಲ್ ಹೃದಯಾಘಾತದಿಂದ ಸಾವು - ಕರ್ತವ್ಯನಿರತ ಕೊಣಾಜೆ ಠಾಣಾ ಹೆಡ್ ಕಾನ್ಸ್ ಸ್ಟೇಬಲ್ ಸಾವು
ಠಾಣೆಯಲ್ಲಿ ಕರ್ತವ್ಯ ನಿರತರಾಗಿದ್ದ ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉಳ್ಳಾಲ ತಾಲೂಕಿನ ಕೊಣಾಜೆ ಠಾಣೆ ನಡೆದಿದೆ.
ಉಳ್ಳಾಲ: ಕರ್ತವ್ಯನಿರತ ಹೆಡ್ ಕಾನ್ಸ್ ಸ್ಟೇಬಲ್ ಹೃದಯಾಘಾತದಿಂದ ಸಾವು
ಕರ್ತವ್ಯದಲ್ಲಿರುವಾಗ ಅಸ್ವಸ್ಥರಾದ ಜಗನ್ನಾಥ ಅವರನ್ನು ತಕ್ಷಣ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಪುತ್ತೂರು ತಾಲೂಕಿನ ಸವಣೂರು ಗ್ರಾಮದವರಾಗಿದ್ದು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಓದಿ :ಚಿತ್ರದುರ್ಗ: ಎಸಿಬಿ ಬಲೆಗೆ ಬಿದ್ದ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ