ಬೆಳ್ತಂಗಡಿ : ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ, ತಾಲೂಕು ಮಟ್ಟದ ವಿವಿಧ ಇಲಾಖೆಗಳ ಎದುರು ಪ್ರತಿಭಟನೆ ನಡೆಸಲಾಯಿತು.
ಸರ್ಕಾರ ನಮ್ಮನ್ನು ನಿರ್ಲಕ್ಷಿಸುತ್ತಿದೆ.. ಆರೋಗ್ಯ ಸಿಬ್ಬಂದಿಯ ಅಳಲು
ಹಲವು ವರ್ಷಗಳಿಂದ ನಾವು ಮುಷ್ಕರ ಮಾಡುತ್ತಿದ್ದರೂ ಸರ್ಕಾರ ನಮ್ಮ ಬಗ್ಗೆ ನಿರ್ಲಕ್ಷ್ಯ ವಹಿಸಿದೆ. ಕನಿಷ್ಠ ಪಕ್ಷ ರಾಜ್ಯದ ಯಾವುದೇ ನಾಯಕರನ್ನು ಕರೆದು ಮಾತನಾಡುವಷ್ಟು ಸೌಜನ್ಯವನ್ನೂ ಸರ್ಕಾರ ತೋರಲಿಲ್ಲ ಎಂದು ಗುತ್ತಿಗೆ ನೌಕರರ ಸಂಘದ ಸಂಚಾಲಕ ಅಜೇಯ್ ಬೇಸರ ವ್ಯಕ್ತ ಪಡಿಸಿದರು.
ಈ ವೇಳೆ ಮಾತನಾಡಿದ ಗುತ್ತಿಗೆ ನೌಕರರ ಸಂಘದ ಸಂಚಾಲಕ ಅಜೇಯ್, ಹಲವು ವರ್ಷಗಳಿಂದ ನಾವು ಮುಷ್ಕರ ಮಾಡುತ್ತಿದ್ದರೂ ಸರ್ಕಾರ ನಮ್ಮ ಬಗ್ಗೆ ನಿರ್ಲಕ್ಷ್ಯ ವಹಿಸಿದೆ. ಕನಿಷ್ಠ ಪಕ್ಷ ರಾಜ್ಯದ ಯಾವುದೇ ನಾಯಕರನ್ನು ಕರೆದು ಮಾತನಾಡುವಷ್ಟು ಸೌಜನ್ಯವನ್ನೂ ತೋರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಕಳೆದ 15 ವರ್ಷಗಳಿಂದ ಕನಿಷ್ಠ ವೇತನಕ್ಕೆ ಯಾವುದೇ ಇತರ ಸೌಲಭ್ಯವಿಲ್ಲದೆ ದುಡಿಯುತ್ತಿದ್ದಾರೆ. ಕೋವಿಡ್ ಸಮಯದಲ್ಲಿ ಖಾಯಂ ಸಿಬ್ಬಂದಿಗಳಿಗಿಂತಲೂ ಹೆಚ್ಚಿನ ಕೆಲಸ ಮಾಡಿದರೂ ನಮ್ಮ ಕರ್ತವ್ಯದ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಕೂಡಲೇ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.