ಕರ್ನಾಟಕ

karnataka

ETV Bharat / state

ಆರೋಗ್ಯ ಸಚಿವ ಡಾ. ಸುಧಾಕರ್ ಧರ್ಮಸ್ಥಳಕ್ಕೆ ಭೇಟಿ - Dr. Visit to Sudhakar Dharmasthala

ಕೊರೊನಾ ಈಗ ಹತೋಟಿಯಲ್ಲಿದ್ದು ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಒಂದು ವರ್ಷದೊಳಗೆ ಕೊರೊನಾ ಸಂಪೂರ್ಣ ನಿರ್ಮೂಲನೆಯಾಗಲಿದೆ. ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಿ ಸಹಕರಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಮನವಿ ಮಾಡಿದರು.

ಡಾ. ಸುಧಾಕರ್
ಡಾ. ಸುಧಾಕರ್

By

Published : Dec 10, 2020, 11:48 PM IST

ಬೆಳ್ತಂಗಡಿ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ಕುಟುಂಬಸ್ಥರೊಂದಿಗೆ ಗುರುವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಬಳಿಕ ಮಾತನಾಡಿದ ಸಚಿವ ಡಾ. ಸುಧಾಕರ್, ಕೊರೊನಾ ಈಗ ಹತೋಟಿಯಲ್ಲಿದ್ದು ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಒಂದು ವರ್ಷದೊಳಗೆ ಕೊರೊನಾ ಸಂಪೂರ್ಣ ನಿರ್ಮೂಲನೆಯಾಗಲಿದೆ. ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಿ ಸಹಕರಿಸಬೇಕು ಎಂದು ಮನವಿಮಾಡಿದರು.

ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ ಸಚಿವ ಡಾ. ಸುಧಾಕರ್ ಕುಟುಂಬಸ್ಥರು

ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅವರ ಸೋದರ ಸಂಬಂಧಿಯೊಬ್ಬರ ಮದುವೆಯಲ್ಲಿ ಭಾಗವಹಿಸಿದ ಬಳಿಕ ಸಚಿವರು ಬೆಂಗಳೂರಿಗೆ ಹಿಂದಿರುಗಿದರು. ಸಚಿವರ ಪತ್ನಿ ಡಾ. ಪ್ರೀತಿ ಹಾಗೂ ಮಕ್ಕಳು ಇದ್ದರು.

ABOUT THE AUTHOR

...view details