ಕರ್ನಾಟಕ

karnataka

ETV Bharat / state

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ: ಸುಬ್ರಹ್ಮಣ್ಯದಿಂದ ಕೆಲವು ಗ್ರಾಮಗಳಿಗೆ ಸಂಪರ್ಕ ಕಡಿತ - ಈಟಿವಿ ಭಾರತ್​ ಕನ್ನಡ

ಹರಿಹರ ಪಲ್ಲತಡ್ಕ ಮುಖ್ಯಪೇಟೆ ಮುಳುಗಡೆಗೊಂಡಿವೆ. ಕೆಲವು ಅಂಗಡಿಗಳು ನದಿ ಪಾಲಾಗಿವೆ. ಹರಿಹರದಿಂದ ಕೊಲ್ಲಮೊಗ್ರು, ಕಲ್ಮಕಾರು ಭಾಗಕ್ಕೆ ಸಂಚರಿಸುವ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ. ಬಾಳುಗೋಡಿಗೂ ಸಂಪರ್ಕ ಕಡಿತವಾಗಿದ್ದು, ಮರ ತೆರವು ಕಾರ್ಯ ನಡೆಯುತ್ತಿದೆ.

heavy-rain-in-dakshina-kannada
ದಕ್ಷಿಣ ಕನ್ನಡ ಭಾರಿ ಮಳೆ

By

Published : Aug 2, 2022, 10:27 PM IST

ಸುಬ್ರಹ್ಮಣ್ಯ(ದಕ್ಷಿಣ ಕನ್ನಡ):ಇಲ್ಲಿಗೆ ಹೊಂದಿಕೊಂಡಿರುವ ಹರಿಹರ, ಬಾಳುಗೋಡು, ಕೊಲ್ಲಮೊಗ್ರು, ಕಲ್ಮಕಾರು, ಬಾಳುಗೋಡು, ಐನಕಿದು ಗ್ರಾಮಗಳಲ್ಲಿ ಸೋಮವಾರ ಸಂಜೆ ಭಾರಿ ಮಳೆಯಾಗಿದೆ. ಇದರಿಂದ ಅಲ್ಲಲ್ಲಿ ಜಲಪ್ರಳಯ, ಭೂಕುಸಿತಗಳು ಸಂಭವಿಸಿದೆ. ಮಳೆಯ ಭೀಕರತೆಗೆ ಹರಿಹರ, ಕೊಲ್ಲಮೊಗ್ರು, ಕಲ್ಮಕಾರು, ಬಾಳುಗೋಡು ಈ ನಾಲ್ಕು ಗ್ರಾಮಗಳಿಗೆ ಸಂಪೂರ್ಣವಾಗಿ ಸಂಪರ್ಕ ಕಡಿತಗೊಂಡಿದೆ.

ಸುಬ್ರಹ್ಮಣ್ಯದಿಂದ ಕೆಲವು ಗ್ರಾಮಗಳಿಗೆ ಸಂಪರ್ಕ ಕಡಿತ

ನಡುಗಲ್ಲು ಮೂಲಕ ಈ ನಾಲ್ಕು ಗ್ರಾಮಗಳ ತಲುಪುವ ಹರಿಹರ ಮಾರ್ಗದ ಮಲ್ಲಾರ ಬಳಿ ದೊಡ್ಡ ಶಂಖ ಎಂಬಲ್ಲಿ ಸೇತುವೆ ಜಲಾವೃತಗೊಂಡು ಸಂಪೂರ್ಣ ಸಂಪರ್ಕ ಕಡಿತವಾಗಿದೆ. ಈಗಾಗಲೇ ಹರಿಹರ ಪಲ್ಲತಡ್ಕ ಮುಖ್ಯಪೇಟೆ ಮುಳುಗಡೆಗೊಂಡು ಕೆಲವು ಅಂಗಡಿಗಳು ನದಿ ಪಾಲಾಗಿವೆ. ಹರಿಹರದಿಂದ ಕೊಲ್ಲಮೊಗ್ರು, ಕಲ್ಮಕಾರು ಭಾಗಕ್ಕೆ ಸಂಚರಿಸುವ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ. ಬಾಳುಗೋಡಿಗೂ ಸಂಪರ್ಕ ಕಡಿತವಾಗಿದ್ದು, ಮರ ತೆರವು ಕಾರ್ಯ ನಡೆಯುತ್ತಿದೆ.

ಕುಕ್ಕೆ ಸುಬ್ರಹ್ಮಣ್ಯ ಮಳೆಯಾಳ ಮಾರ್ಗವಾಗಿ ಹರಿಹರ ಈ ಭಾಗದ ಗುಂಡಡ್ಕ ಸೇತುವೆ ಮುಳುಗಡೆಗೊಂಡಿದೆ. ಪಲ್ಲತ್ತಡ್ಕ ಎಂಬಲ್ಲಿ ನದಿ ದಂಡೆ ಮೇಲಿನ ಎರಡು ಮನೆಗಳು, ಅಂಗಡಿಗಳು ಸಂಪೂರ್ಣ ಜಲಾವೃತವಾಗಿ ನೀರಲ್ಲಿ ಕೊಚ್ಚಿ ಹೋಗಿದೆ. ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ವತಿಯಿಂದ ಸಾರ್ವಜನಿಕರಿಗೆ ಭೋಜನದ ವ್ಯವಸ್ಥೆ ಕಲ್ಪಿಸಲಾಗಿದೆ.

ಇದನ್ನೂ ಓದಿ :ತುಮಕೂರು: ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋದ ಶಿಕ್ಷಕ ಸಾವು

ABOUT THE AUTHOR

...view details