ಕರ್ನಾಟಕ

karnataka

By

Published : Oct 25, 2019, 9:59 PM IST

ETV Bharat / state

ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಬಿರುಸು ಪಡೆದ ಮಳೆ.. ನಾಳೆ ಶಾಲಾ-ಕಾಲೇಜುಗಳಿಗೆ ರಜೆ!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ರಜೆ ಘೋಷಿಸಿದ್ದಾರೆ.

ದ.ಕ.ಜಿಲ್ಲೆಯಾದ್ಯಂತ ಬಿರುಸು ಪಡೆದ ಮಳೆ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ರಜೆ ಘೋಷಿಸಿದ್ದಾರೆ.

ಹವಾಮಾನ ಇಲಾಖೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ನಾಳೆ ಭಾರಿ ಮಳೆಯಾಗುವ ಸಂಭವವಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನೀರು ಇರುವ ತಗ್ಗು ಪ್ರದೇಶ,ಕೆರೆ, ನದಿ, ಸಮುದ್ರ ತೀರಗಳಿಗೆ ಮಕ್ಕಳು ಹೋಗದಂತೆ ಎಚ್ಚರ ವಹಿಸಬೇಕೆಂದು ಪಾಲಕರಿಗೆ ಸೂಚಿಸಲಾಗಿದೆ.

ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಬಿರುಸು ಪಡೆದ ಮಳೆ.. ನಾಳೆ ಶಾಲಾ-ಕಾಲೇಜುಗಳಿಗೆ ರಜೆ!

ವಾಯುಭಾರ ಕುಸಿತದ ಪರಿಣಾಮ,ಮಳೆ ಬಿರುಸು:

ಅರಬ್ಬಿ ಸಮುದ್ರ ಹಾಗೂ ಲಕ್ಷದ್ವೀಪದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಇಂದು ಮಧ್ಯಾಹ್ನದ ಬಳಿಕ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ತೀವ್ರ ಬಿರುಸು ಪಡೆದಿದೆ. ಪರಿಣಾಮ ಅಲ್ಲಲ್ಲಿ ಹಾನಿ ಸಂಭವಿಸಿದೆ. ವಿಟ್ಲ, ಮೂಡುಬಿದಿರೆ ತಾಲೂಕಿನ ಪ್ರಾಂತ್ಯ, ಸುಳ್ಯ ತಾಲೂಕಿನ ಗುತ್ತಿಗಾರು ಪ್ರದೇಶಗಳಲ್ಲಿ ಮನೆಗಳ ಮೇಲೆ ಮರ ಬಿದ್ದು ಮನೆಗಳ ಮೇಲ್ಛಾವಣಿಗೆ ಹಾನಿ ಸಂಭವಿಸಿದೆ.

ಅಲ್ಲದೆ ಸಸಿಹಿತ್ಲು ಬೀಚ್ ಪರಿಸರದಲ್ಲಿ ತೀವ್ರ ಕಡಲ್ಕೊರೆತ ಉಂಟಾಗಿದ್ದು, ಬೀಚ್ ಪರಿಸರದ ಹಲವಾರು ಮರಗಳು ಸಮುದ್ರ ಪಾಲಾಗಿವೆ. ಉಳ್ಳಾ, ಕೈಕೋ, ಉಚ್ಚಿಲ ಪ್ರದೇಶಗಳಲ್ಲಿಯೂ ಕಡಲು ತೀವ್ರವಾಗಿ ಪ್ರಕ್ಷುಬ್ಧಗೊಂಡಿದ್ದು, ಕಡಲ್ಕೊರೆತ ಪ್ರಮಾಣ ಅಧಿಕವಾಗಿದೆ.

ಅಲ್ಲದೆ ತೀವ್ರ ಗಾಳಿ, ಮಳೆಯ ಕಾರಣ ಭಾರಿ ಸಂಖ್ಯೆಯ ಮೀನುಗಾರಿಕಾ ಬೋಟುಗಳು ಬಂದರು ಪ್ರದೇಶದಲ್ಲಿ ಲಂಗರು ಹಾಕಿವೆ. ಬಂದರು ಪ್ರವೇಶಿಸುವ ಸಮುದ್ರ ಬಾಗಿಲಿನಲ್ಲಿಯೇ ಸುಮಾರು 200ಕ್ಕೂ ಬೋಟುಗಳು ನಿಂತಿರುವುದರಿಂದ ಕೋಸ್ಟ್ ಗಾರ್ಡ್ ರಕ್ಷಣಾ ನೌಕೆಗೆ ಸಮುದ್ರದಲ್ಲಿ ಕಾರ್ಯಾಚರಣೆ ನಡೆಸಲು ಸಮುದ್ರಕ್ಕೆ ತೆರಳಲು ಅಡಚಣೆಯಾಗಿದೆ.

ABOUT THE AUTHOR

...view details