ಮಂಗಳೂರು:ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ಮಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದೆ.
ಮಂಗಳೂರಿನಲ್ಲಿ ಭಾರೀ ಮಳೆ: ಕರಾವಳಿ ಭಾಗದಲ್ಲಿ ಮುಂದಿನ 5 ದಿನ ವರುಣನ ಆರ್ಭಟ! - ಮಳೆ
ಹಗಲಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುತ್ತಿದ್ದರೂ ರಾತ್ರಿ ಆಗುತ್ತಿದ್ದಂತೆ ಧಾರಾಕಾರವಾಗಿ ಮಳೆ ಸುರಿಯಲಾರಂಭಿಸಿದೆ. ಮಂಗಳೂರು ಮಾತ್ರವಲ್ಲದೆ ಜಿಲ್ಲೆಯಾದ್ಯಾಂತ ಸುರಿದ ಮಳೆಗೆ ಕೆಲವೊಬ್ಬರ ಮೊಗದಲ್ಲಿ ಸಂತಸವೂ ಮೂಡಿದೆ.
![ಮಂಗಳೂರಿನಲ್ಲಿ ಭಾರೀ ಮಳೆ: ಕರಾವಳಿ ಭಾಗದಲ್ಲಿ ಮುಂದಿನ 5 ದಿನ ವರುಣನ ಆರ್ಭಟ! heavy rain in mangalore](https://etvbharatimages.akamaized.net/etvbharat/prod-images/768-512-7884004-thumbnail-3x2-rain.jpg)
ಹಗಲಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುತ್ತಿದ್ದರೂ ರಾತ್ರಿ ಆಗುತ್ತಿದ್ದಂತೆ ಧಾರಾಕಾರವಾಗಿ ಮಳೆ ಸುರಿಯಲಾರಂಭಿಸುತ್ತದೆ. ಮಂಗಳೂರು ಮಾತ್ರವಲ್ಲದೆ ಜಿಲ್ಲೆಯಾದ್ಯಾಂತ ಸುರಿದ ಮಳೆಗೆ ಕೆಲವೊಬ್ಬರ ಮೊಗದಲ್ಲಿ ಸಂತಸವೂ ಮೂಡಿದೆ. ಮಳೆಯ ನಿರೀಕ್ಷೆಯಲ್ಲಿದ್ದ ಕೃಷಿಕರು ಮತ್ತು ರೈತರು ಸಂತಸಗೊಂಡಿದ್ದಾರೆ.
ಪಶ್ಚಿಮ ಅರಬ್ಬಿ ಸಮುದ್ರದಲ್ಲಿ ಸುಮಾರು 1.5 ಕಿ.ಮೀ. ಎತ್ತರದಿಂದ 3.1 ಕಿ.ಮೀ. ಎತ್ತರದವರೆಗೆ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಇದರಿಂದ ಕರಾವಳಿ ಭಾಘದ ಜಿಲ್ಲೆಗಳಾದ ದ.ಕ., ಉಡುಪಿ ಹಾಗೂ ಉತ್ತರ ಕನ್ನಡ ಭಾಗಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.