ಮಂಗಳೂರು :ನಗರದಲ್ಲಿ ಕಳೆದ ಮೂರು ದಿನಗಳಿಂದ ಮಳೆ ಬಿಡದೆ ಸುರಿಯುತ್ತಿದೆ. ಪರಿಣಾಮ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಅಲ್ಲಲ್ಲಿ ಭೂ ಕುಸಿತ, ಆಸ್ತಿ-ಪಾಸ್ತಿಗಳಿಗೆ ಹಾನಿ ಸಂಭವಿಸಿದೆ.
ನಗರ ಹೊರ ವಲಯದ ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನಕ್ಕೆ ನೀರು ನುಗ್ಗಿದೆ. ದೇವಸ್ಥಾನದ ಪೂರ್ವದಲ್ಲಿ ನದಿ ಇದ್ದು, ಪಶ್ಚಿಮದಲ್ಲಿ ಸಮುದ್ರವಿದೆ. ಸಮುದ್ರ ಮತ್ತು ನದಿ ದೇವಸ್ಥಾನದಿಂದ ಕೇವಲ 50 ಮೀಟರ್ ಅಂತರದಲ್ಲಿವೆ. ನೀರಿನ ಮಟ್ಟ ಏರಿಕೆಯ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಅದೇ ರೀತಿ ಬಪ್ಪನಾಡು ಶ್ರೀ ದುರ್ಗಾ ಪರಮೇಶ್ವರಿ ದೇಗುಲವೂ ಜಲಾವೃತವಾಗಿದೆ.